• Home  
  • ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ- ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ (Kaup Dandatheertha School Annual General meeting  of the Guardian – Teachers Association)
- ಶಾಲಾ ಕಾಲೇಜು

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ- ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ (Kaup Dandatheertha School Annual General meeting  of the Guardian – Teachers Association)

Share: ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ– ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಸಂಸ್ಥೆಯ ಸಂಚಾಲಕರಾದ ಡಾ. ಕೆ ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು.   ಸಂಚಾಲಕ ಡಾ. ಕೆ ಪ್ರಶಾಂತ್ ಶೆಟ್ಟಿಯವರು ಶಾಲೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿ, ರಕ್ಷಕ-ಶಿಕ್ಷಕ ಸಂಘವು ವಿದ್ಯಾಸಂಸ್ಥೆಯ ಪ್ರಗತಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಹೆತ್ತವರಾದ ತಾವು ಮಕ್ಕಳಲ್ಲಿ ಶಿಸ್ತನ್ನು ಬೆಳೆಸುವಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದೀರಿ. ಪಾಠದ ಜೊತೆಗೆ […]

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

(Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಸಂಸ್ಥೆಯ ಸಂಚಾಲಕರಾದ ಡಾ. ಕೆ ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು.

  ಸಂಚಾಲಕ ಡಾ. ಕೆ ಪ್ರಶಾಂತ್ ಶೆಟ್ಟಿಯವರು ಶಾಲೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿ, ರಕ್ಷಕ-ಶಿಕ್ಷಕ ಸಂಘವು ವಿದ್ಯಾಸಂಸ್ಥೆಯ ಪ್ರಗತಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಹೆತ್ತವರಾದ ತಾವು ಮಕ್ಕಳಲ್ಲಿ ಶಿಸ್ತನ್ನು ಬೆಳೆಸುವಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದೀರಿ. ಪಾಠದ ಜೊತೆಗೆ ಇತರ ವಿಷಯಗಳ ಕಲಿಕೆಗೆ ಪ್ರೋತ್ಸಾಹಿಸುತ್ತಿದ್ದೀರಿ. ಮುಂದಿನ ದಿನಗಳಲ್ಲಿ ಇಂತಹ ಸಹಕಾರವನ್ನು ನೀಡಿ ಎಂಬ ಸಂದೇಶ ನೀಡಿದರು.

ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಗೇಬ್ರಿಯಲ್ ಮಸ್ಕರೇನ್ಹಸ್ ಹೆತ್ತವರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಾಂಶುಪಾಲರಾದ ನೀಲಾನಂದ್ ನಾಯ್ಕ್ ರವರು ಸ್ವಾಗತಿಸಿ, ಫಲಿತಾಂಶ ವಿಶ್ಲೇಷಣೆ ಹಾಗೂ ವರದಿ ವಾಚಿಸಿದರು.

ಈ ಬಾರಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ  ಗಳಿಸಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಉಪನ್ಯಾಸಕಿ ಸುಷ್ಮಾರವರು ಪರಿಚಯಿಸಿದರು.

ವಿದ್ಯಾರ್ಥಿಗಳನ್ನುಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಂಘದ ಲೆಕ್ಕಪತ್ರವನ್ನು ಮಂಡಿಸಿದ ವಿದ್ಯಾಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ಶಿವಣ್ಣ ಬಾಯಾರ್ ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆಮಾಡಿದರು.

ಸಭೆಯಲ್ಲಿ ರಕ್ಷಕ-ಶಿಕ್ಷಕ ಸಂಘಕ್ಕೆ ಆಯ್ಕೆಯಾದ ಪ್ರೌಢ ಮತ್ತು ಕಾಲೇಜು ವಿಭಾಗದ ಅಧ್ಯಕ್ಷೆ ಮಂಜುಳ ಶೆಟ್ಟಿ ಮತ್ತು ಪ್ರಾಥಮಿಕ ವಿಭಾಗದ ಅಧ್ಯಕ್ಷೆ ಸ್ವಾತಿ, ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ಉಪಸ್ಥಿತರಿದ್ದರು.

 ಶಿಕ್ಷಕರಾದ ಉದಯಕುಮಾರ್ ನಿರೂಪಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಶೆಟ್ಟಿಯವರು ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.