• Home  
  • ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟನೆ (Kaup: Smart classroom inaugurated at Dandatirtha Education trust))
- ಶಾಲಾ ಕಾಲೇಜು

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟನೆ (Kaup: Smart classroom inaugurated at Dandatirtha Education trust))

Share: ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟನೆ (Kaup) ಕಾಪು: ಕಾಪು ದಂಡತೀರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗಗಳನ್ನು ಒಳಗೊಂಡ ಶತಮಾನೋತ್ಸವ ಕಟ್ಟಡದಲ್ಲಿ ಹೊಸದಾಗಿ ನಿರ್ಮಿಸಲಾದ ಸಭಾ ಭವನ ಮತ್ತು ಸ್ಮಾರ್ಟ್ ಕ್ಲಾಸ್ ವಿಭಾಗವನ್ನು ವಿಜಯಾ ಬ್ಯಾಂಕ್ ನ ನಿವೃತ್ತ ಜನರಲ್ ಮ್ಯಾನೇಜರ್ ಕಾಪು ಜಯಕರ ಶೆಟ್ಟಿ ಉದ್ಘಾಟಿಸಿದರು.  ಬಳಿಕ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಕಾಪು ಪರಿಸರದಲ್ಲಿ ಅತ್ಯಂತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದಾದ ಈ ವಿದ್ಯಾಸಂಸ್ಥೆಯಲ್ಲಿ ನೂರಾರು […]

(Kaup) ಕಾಪು: ಕಾಪು ದಂಡತೀರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗಗಳನ್ನು ಒಳಗೊಂಡ ಶತಮಾನೋತ್ಸವ ಕಟ್ಟಡದಲ್ಲಿ ಹೊಸದಾಗಿ ನಿರ್ಮಿಸಲಾದ ಸಭಾ ಭವನ ಮತ್ತು ಸ್ಮಾರ್ಟ್ ಕ್ಲಾಸ್ ವಿಭಾಗವನ್ನು ವಿಜಯಾ ಬ್ಯಾಂಕ್ ನ ನಿವೃತ್ತ ಜನರಲ್ ಮ್ಯಾನೇಜರ್ ಕಾಪು ಜಯಕರ ಶೆಟ್ಟಿ ಉದ್ಘಾಟಿಸಿದರು.

 ಬಳಿಕ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಕಾಪು ಪರಿಸರದಲ್ಲಿ ಅತ್ಯಂತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದಾದ ಈ ವಿದ್ಯಾಸಂಸ್ಥೆಯಲ್ಲಿ ನೂರಾರು ಮಂದಿ ವಿದ್ಯಾರ್ಜನೆ ಗೈದು ಉನ್ನತ ಸ್ಥಾನಗಳಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅವರ ಬದುಕಿಗೆ ಆಧಾರ ಸ್ಥಂಭವಾಗಿದ್ದ ಈ ವಿದ್ಯಾಸಂಸ್ಥೆ ಪಾಠ – ಪಾಠೇತರ ಚಟುವಟಿಕೆಗಳಲ್ಲಿ ಜಿಲ್ಲೆ, ರಾಜ್ಯವನ್ನು ಪ್ರತಿನಿಧಿಸಿವೆ. ಸಾವಿರಾರು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ನಿರ್ಮಿಸಲ್ಪಟ್ಟ ಹೊಸ ಸಭಾಭವನ ಮತ್ತು ಸ್ಮಾರ್ಟ್ ಕ್ಲಾಸ್ ತರಗತಿಗಳು ಬದಲಾದ ಸನ್ನಿವೇಶದಲ್ಲಿ ಅತ್ಯಂತ ಅವಶ್ಯಕ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಲಿ ಹಾಗೂ ಮುಂದಿನ ಪೀಳಿಗೆಗೆ ಇವುಗಳು ಪ್ರೇರಣೆ ನೀಡಲಿ ಎಂದು ಶುಭ ಹಾರೈಸಿದರು.

 ವಿದ್ಯಾ ಸಂಸ್ಥೆಯ ಸಂಚಾಲಕ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಅವರು ಮಾತನಾಡಿ, ಇಂದಿನ ಸಮಯದಲ್ಲಿ ಮಕ್ಕಳ ಪ್ರತಿಭೆ ವಿಶಿಷ್ಟವಾಗಿ ಅರಳಬೇಕಾದರೆ ಸ್ಮಾರ್ಟ್ ತರಗತಿಗಳು ಕೂಡಾ ಮೂಲ ಕಾರಣವಾಗಿದೆ. ಇದರ ಲಾಭ ಮಕ್ಕಳಿಗೆ ಕ್ರಿಯಾಶೀಲವಾಗಿ ಸಿಗಲಿ ಹಾಗೂ ಸುಸಜ್ಜಿತ ಸಭಾಭವನ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗಲಿ ಎಂದು ಶುಭ ಹಾರೈಸಿದರು.

 ಸಮಾರಂಭದಲ್ಲಿ ಕಾಪು ಗೋವಿಂದ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ನ ಅಧ್ಯಕ್ಷೆ ಶೋಭಾ ಪಿ. ಶೆಟ್ಟಿ, ಸದಸ್ಯರಾದ ಪನ್ನಾ ಪಿ. ಶೆಟ್ಟಿ, ಎಲ್. ಐ .ಸಿ.ಕಾಪು ಇದರ ನಿವೃತ್ತ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್,ಉದ್ಯಮಿ  ಸುಧಾಕರ ಶೆಟ್ಟಿ, ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರುಗಳಾದ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ಶೈಕ್ಷಣಿಕ ಸಂಯೋಜಕ ಶಿವಣ್ಣ ಬಾಯರ್, ಶಿಕ್ಷಕ – ಶಿಕ್ಷಕೇತರರು, ವಿದ್ಯಾರ್ಥಿ ಹಾಗೂ ಹೆತ್ತವರು ಉಪಸ್ಥಿತರಿದ್ದರು.

 ಪ್ರಾಂಶುಪಾಲ ನೀಲಾನಂದ ನಾಯ್ಕ್ ಸ್ವಾಗತಿಸಿದರು. ಶಿಕ್ಷಕಿ ಸುನೈನಾ ನಿರೂಪಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರಾಜಲಕ್ಷ್ಮೀ ರಾವ್ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.