ಕಾಪು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಸಾಸನ ಫಲಾನುಭವಿ ಕುಟುಂಬಗಳಿಗೆ ಹಣ್ಣು ಹಂಪಲು ವಿತರಣೆ
ಡಾ. ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ವಿತರಣೆ
(Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ ಡಾ. ಹೇಮಾವತಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಾಪು ತಾಲೂಕಿನ ಮಾಸಾಸನ ಫಲಾನುಭವಿಗಳಾದ ಅರವತ್ತೆಂಟು ಕುಟುಂಬಗಳಿಗೆ ಗುರುವಾರ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಕಾಪು ವಲಯದ ಮಾಸಾಸನ ಫಲಾನುಭವಿಯಾದ ಉಮೇಶ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿಶ್ರೀಮತಿ ಮಮತಾ ಶೆಟ್ಟಿ ಅವರು ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಫಲಾನುಭವಿಯ ಯೋಗಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ವಾರಿಜ ಮತ್ತು ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಉಪಸ್ಥಿತರಿದ್ದರು.

