ಕಾಪು ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ (Kaup MLA Gurme Suresh Shetty meeting with Kaup Muncipal Officers)
ಕಾಪು ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
(Kaup) ಕಾಪು: ಕಾಪು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಮತ್ತು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಬುಧವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ಸಭೆ ನಡೆಯಿತು.
ಕಾಪು ಪೇಟೆಯಲ್ಲಿ ತ್ಯಾಜ್ಯ ನೀರು ಸಂಸ್ಕಾರಣಾ ಘಟಕ ನಿರ್ಮಿಸಲು (STP) ಸ್ಥಳದ ಗುರುತಿಸುವ ಬಗ್ಗೆ, ಎಸ್.ಬಿ.ಎಂ 2.0 ಅನುದಾನದಲ್ಲಿ ಮಂಜೂರಾಗಿರುವ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ಜಾಗ ಗುರುತಿಸುವ ವಿಚಾರದ ಬಗ್ಗೆ, ಕಾಪು ಬೀಚ್ ಬಳಿ IDSMT ಅನುದಾನದಲ್ಲಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯದ ಹರಾಜು ಕರೆಯುವ ಬಗ್ಗೆ, ಕಾಪು ಬೀಚ್ನಲ್ಲಿ ಅಳವಡಿಸಲಾದ ಮಿನಿಮಾಸ್ಟ್ ಮತ್ತು ಹೈಮಾಸ್ಟ್ ದೀಪಗಳ ನಿರ್ವಹಣೆಯ ಕುರಿತು, ಪ್ರವಾಸೋದ್ಯಮ ಇಲಾಖೆಯವರೊಂದಿಗೆ ಚರ್ಚಿಸುವ ವಿಚಾರದ ಬಗ್ಗೆ, ಕಾಪು ಪುರಸಭೆಗೆ ಉದ್ಯಾವರ ಹೊಳೆಯನ್ನು ಮೂಲವಾಗಿರಿಸಿಕೊಂಡು ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀರನ್ನು ಪೂರೈಸುವ ಬಗ್ಗೆ ಪುರಸಭೆ, KUWS & DB ಇಲಾಖೆಗಳೊಂದಿಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಕಾಪು ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್, ಕಾಪು ಪುರಸಭೆಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.