• Home  
  • ಕಾಪು ಪುರಸಭೆಯ ಸಾಮಾನ್ಯ ಸಭೆ – ಇಲಾಖಾ ಅಧಿಕಾರಿಗಳ ಗೈರು ಹಾಜರಿ, ಸದಸ್ಯರ ಆಕ್ರೋಶ (Kaup Municipality General Meeting – Absence of departmental officers, members outraged)
- ಕಾಪು ತಾಲೂಕು ಆಡಳಿತ - ರಾಜಕೀಯ

ಕಾಪು ಪುರಸಭೆಯ ಸಾಮಾನ್ಯ ಸಭೆ – ಇಲಾಖಾ ಅಧಿಕಾರಿಗಳ ಗೈರು ಹಾಜರಿ, ಸದಸ್ಯರ ಆಕ್ರೋಶ (Kaup Municipality General Meeting – Absence of departmental officers, members outraged)

Share: ಕಾಪು ಪುರಸಭೆಯ ಸಾಮಾನ್ಯ ಸಭೆ – ಇಲಾಖಾ ಅಧಿಕಾರಿಗಳ ಗೈರು ಹಾಜರಿ, ಸದಸ್ಯರ ಆಕ್ರೋಶ (Kaup) ಕಾಪು : ಕಾಪು ಪುರಸಭೆಯ ಸಾಮಾನ್ಯ ಸಭೆಯು ಮಂಗಳವಾರ ಬೆಳಿಗ್ಗೆ ಪುರಸಭೆಯ ಇಂದಿರಾ ಗಾಂಧಿ ಸಭಾಂಗಣದಲ್ಲಿ ಪುರಸಭಾಧ್ಯಕ್ಷೆ ಹರಿಣಾಕ್ಷಿ ದೇವಾಡಿಗರವರ ಅಧ್ಯಕ್ಷತೆಯಲ್ಲಿ ಜರಗಿತು.   ಸಭೆಯಲ್ಲಿ ಕೇವಲ ಬೆರಳೆಣಿಕೆಯ ವಿವಿಧ ಇಲಾಖಾ ಅಧಿಕಾರಿ ವರ್ಗದವರು ಹಾಜರಾಗಿದ್ದು, ಈ ಬಗ್ಗೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಘಟಿಸಿದೆ. ಇದಕ್ಕೆ ಉತ್ತರಿಸಿದ ಪುರಸಭಾಧಿಕಾರಿ ನಾಗರಾಜ್‌, ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿರುವಂತೆ ಪತ್ರ […]

(Kaup) ಕಾಪು : ಕಾಪು ಪುರಸಭೆಯ ಸಾಮಾನ್ಯ ಸಭೆಯು ಮಂಗಳವಾರ ಬೆಳಿಗ್ಗೆ ಪುರಸಭೆಯ ಇಂದಿರಾ ಗಾಂಧಿ ಸಭಾಂಗಣದಲ್ಲಿ ಪುರಸಭಾಧ್ಯಕ್ಷೆ ಹರಿಣಾಕ್ಷಿ ದೇವಾಡಿಗರವರ ಅಧ್ಯಕ್ಷತೆಯಲ್ಲಿ ಜರಗಿತು.

  ಸಭೆಯಲ್ಲಿ ಕೇವಲ ಬೆರಳೆಣಿಕೆಯ ವಿವಿಧ ಇಲಾಖಾ ಅಧಿಕಾರಿ ವರ್ಗದವರು ಹಾಜರಾಗಿದ್ದು, ಈ ಬಗ್ಗೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಘಟಿಸಿದೆ.

ಇದಕ್ಕೆ ಉತ್ತರಿಸಿದ ಪುರಸಭಾಧಿಕಾರಿ ನಾಗರಾಜ್‌, ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿರುವಂತೆ ಪತ್ರ ಬರೆದಿದ್ದೇವೆ. ಆದರೂ ಕೇವಲಾ ಮೂರ್ನಾಲ್ಕು ಇಲಾಖೆಯ ಅಧಿಕಾರಿಗಳು ಬಂದಿದ್ದಾರೆ ಎಂದು ಅಸಹಾಯಕತೆ ವ್ಯಕ್ತ ಪಡಿಸಿದರು.

ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸುವಂತೆ ಸದಸ್ಯರು ಹೇಳಿದ್ದಾರೆ.

ಮೆಸ್ಕಾಂ ಇಲಾಖಾ ಸಿಬ್ಬಂದಿಯವರು ಜಂಗಲ್‌ ಕಟ್ಟಿಂಗ್‌ ಮಾಡಿ ಗೆಲ್ಲುಗಳನ್ನು ರಸ್ತೆಯಲ್ಲಿ ಮತ್ತು ರಸ್ತೆ ಪಕ್ಕದ ಚರಂಡಿಯಲ್ಲಿ ಹಾಕಿ ಹೋಗುತ್ತಿದ್ದು, ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಸದಸ್ಯರು ಮೆಸ್ಕಾಂ ಅಧಿಕಾರಿಯವರಿಗೆ ಹೇಳಿದ್ದಾರೆ. ಮುಂದೆ ಇಂತಹಾ ಸಮಸ್ಯೆಗೆ ಆಸ್ಪದ ನೀಡುವುದಿಲ್ಲ ಎಂದು ಅಧಿಕಾರಿ ಭರವಸೆ ನೀಡಿದರು.

 ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ,  ಉಪಾಧ್ಯಕ್ಷೆ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್, ಪುರಸಭೆಯ ಸದಸ್ಯರು, ಪುರಸಭೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.