ಕಾಪು: ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಶರಣು
(Kaup) ಕಾಪು: ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ವಸತಿಗೃಹದಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ಬೆಳಿಗ್ಗೆ ಮುಂಜಾನೆ ಬೆಳಕಿಗೆ ಬಂದಿದೆ.
ಜ್ಯೋತಿ (29) ಮೃತ ಮಹಿಳಾ ಪೊಲೀಸ್ ಸಿಬ್ಬಂದಿ.
ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದರು. ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು, ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿದ ಘಟನೆ ಬೆಳಕಿ ಬಂದಿದೆ.
ಅವರು ಕೂಡಲೇ ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ನೋಡಿದಾಗ, ಜ್ಯೋತಿ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ (DYSP Aravind Kalagujji), ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್.(Kaup Tahashildar Prathibha R) ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ (Abdul Khader)ಸ್ಥಳದಲ್ಲಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


