ಕಾಪು : ಬಸ್ ಡಿಕ್ಕಿಯಾಗಿ ಯುವಕ ಮೃತ್ಯು
(Kaup) ಕಾಪು : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ K1 ಹೋಟೆಲಿನ ಎದುರು ಖಾಸಗಿ ಬಸ್ಸೊಂದು ಯುವಕನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟ ಘಟನೆ ಬುಧವಾರ ರಾತ್ರಿ ಘಟಿಸಿದೆ.
ಮೃತ ಯುವಕನನ್ನು ಕೊಪ್ಪಳದ ಅಮರೇಶ್ (24) ಎಂದು ಗುರುತಿಸಲಾಗಿದೆ.
K1 ಹೋಟೆಲಿನಿಂದ ಪಾರ್ಸೆಲ್ ಪಡೆದು ರಸ್ತೆ ದಾಟುತ್ತಿದ್ದಾಗ ಮಂಗಳೂರಿನಿಂದ ಉಡುಪಿಯ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಅಮರೇಶ್ ಗಂಭೀರವಾಗಿ ಗಾಯಗೊಂಡಿದ್ದರು.
ಈ ವೇಳೆ ಯುವಕನನ್ನು ಅಂಬ್ಯುಲೆನ್ಸ್ ಮೂಲಕ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಿದ್ದು, ಆತನನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

