• Home  
  • ಕಾಪು ಬಿಜೆಪಿ, ಎಸ್ ಸಿ ಮೋರ್ಚಾದಿಂದ ಪ್ರತಿಭಟನೆ
- ರಾಜಕೀಯ

ಕಾಪು ಬಿಜೆಪಿ, ಎಸ್ ಸಿ ಮೋರ್ಚಾದಿಂದ ಪ್ರತಿಭಟನೆ

Share: (Kaup) ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್ ಮೋರ್ಚಾ ವತಿಯಿಂದ ಮೀಸಲಾತಿ ರದ್ದುಪಡಿಸುವ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಯಿತು. ಸೂಕ್ತ ಸಂದರ್ಭದಲ್ಲಿ ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದು ಲೋಕಸಭೆಯ ವಿಷಕ್ಷ ನಾಯಕ ರಾಹುಲ್ ಗಾಂಧಿಯವರು ಅಮೇರಿಕಾದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ರಾಹುಲ್ ಗಾಂಧಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕಾಪು ಪೇಟೆಯಲ್ಲಿ ಇಂದು ಮಂಡಲ ಅಧ್ಯಕ್ಷರಾದ ಜಿತೇಂದ್ರ […]

(Kaup) ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್ ಮೋರ್ಚಾ ವತಿಯಿಂದ ಮೀಸಲಾತಿ ರದ್ದುಪಡಿಸುವ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಯಿತು.
ಸೂಕ್ತ ಸಂದರ್ಭದಲ್ಲಿ ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದು ಲೋಕಸಭೆಯ ವಿಷಕ್ಷ ನಾಯಕ ರಾಹುಲ್ ಗಾಂಧಿಯವರು ಅಮೇರಿಕಾದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ರಾಹುಲ್ ಗಾಂಧಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕಾಪು ಪೇಟೆಯಲ್ಲಿ ಇಂದು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್‌ರವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ರಮೇಶ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಚಂದ್ರ ಪಂಚವಟಿ, ಕ್ಷೇತ್ರ ಪ್ರಧಾನಕಾರ್ಯದರ್ಶಿಯಾದ ಗೋಪಾಲಕೃಷ್ಣ ರಾವ್, ಕ್ಷೇತ್ರ ಕಾರ್ಯದರ್ಶಿ ಎಂ.ಜಿ ನಾಗೇಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ನೀತಾ ಗುರುರಾಜ್, ರೈತ ಮೋರ್ಚಾ ಅಧ್ಯಕ್ಷರಾದ ಕೃಷ್ಣ ರಾವ್, ಜಿಲ್ಲಾ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ಸದಾನಂದ, ಎಸ್.ಸಿ ಮೋರ್ಚಾ ಪ್ರಮುಖರಾದ ಪಾರ್ಥ ಸಾರಥಿ, ಚಂದ್ರ ಮಲ್ಲಾರು, ಕಾರ್ಯಾಲಯ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಲ್ಲಾರು ಮತ್ತು ಪಕ್ಷದ ವಿವಿಧ ಸ್ತರದ ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು

Leave a comment

Your email address will not be published. Required fields are marked *

eMedia Kannada  @2025. All Rights Reserved.