• Home  
  • ಕಾಪು ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ  (Kaup BJP : Yugadi, Ambedkar Jayanthi Celebration)
- ಕರಾವಳಿ - ಜೀವನಶೈಲಿ

ಕಾಪು ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ  (Kaup BJP : Yugadi, Ambedkar Jayanthi Celebration)

Share: ಕಾಪು ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ   (Kaup) ಕಾಪು: ಕಾಪು ಮಂಡಲ ಬಿಜೆಪಿ ವತಿಯಿಂದ ಇಂದು ಯುಗಾದಿ ಹಬ್ಬ ಸಂಭ್ರಮಾಚರಣೆ ಹಾಗೂ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ (DR BR Ambedkar )ಅವರ ಜಯಂತಿ ಆಚರಿಸಲಾಯಿತು.   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ(Kaup MLA Gurme Suresh Shetty) ಅವರು ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ […]

ಕಾಪು ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ  

(Kaup) ಕಾಪು: ಕಾಪು ಮಂಡಲ ಬಿಜೆಪಿ ವತಿಯಿಂದ ಇಂದು ಯುಗಾದಿ ಹಬ್ಬ ಸಂಭ್ರಮಾಚರಣೆ ಹಾಗೂ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ (DR BR Ambedkar )ಅವರ ಜಯಂತಿ ಆಚರಿಸಲಾಯಿತು. 

 ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ(Kaup MLA Gurme Suresh Shetty) ಅವರು ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ ಯುಗಾದಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.

 ಈ ಸಂದರ್ಭ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್(Ex MLA Lalaji R Mendon), ಕಾಪು ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ  ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ಕಾಮತ್, ಪ್ರಧಾನ ಕಾರ್ಯದರ್ಶಿ ಅನಿತಾ ಮರವಂತೆ, ಕಾಪು  ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿ ಕೇಸರಿ, ರಾಜೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಶಶಿಪ್ರಭಾ ಶೆಟ್ಟಿ, ವಕ್ತಾರರಾದ ನವೀನ್ ಎಸ್. ಕೆ, ಕಾಪು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರವಿ ಕೋಟ್ಯಾನ್, ರಾಜ್ಯ ಬಿಜೆಪಿಯ ನಿಕಟಪೂರ್ವ ಉಪಾಧ್ಯಕ್ಷೆ ನಯನ ಗಣೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.