ಕಾಪು: ಶಾಸಕರ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಕ್ರಮೀಕರಣ ಸಮಿತಿ ಸಭೆ
(Kaup)ಕಾಪು: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಕಾಪು ತಹಸೀಲ್ದಾರ ಕಚೇರಿಯಲ್ಲಿ ನಡೆಯಿತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 9 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸಮಿತಿಯುಲ್ಲಿ ಮಂಡಿಸಲಾಯಿತು.
ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿ ಕಾಪು ತಹಶೀಲ್ದಾರರಾದ ಡಾ. ಪ್ರತೀಭಾ ಆರ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

