• Home  
  •  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಆತ್ರಾಡಿ – ಮಂಗಳೂರು ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ  ಪರಿಶೀಲನೆ (Kapu MLA Gurme Suresh Shetty inspects Atradi-Mangalore State Highway road works)
- Mansoon - ರಾಜಕೀಯ

 ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಆತ್ರಾಡಿ – ಮಂಗಳೂರು ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ  ಪರಿಶೀಲನೆ (Kapu MLA Gurme Suresh Shetty inspects Atradi-Mangalore State Highway road works)

Share: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಆತ್ರಾಡಿ – ಮಂಗಳೂರು ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ  ಪರಿಶೀಲನೆ (Udupi) ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಆತ್ರಾಡಿ – ಮಂಗಳೂರು ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಹಾಗೂ ಕಿರು ಸೇತುವೆ ನಿರ್ಮಾಣಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದ್ದು, ಭಾನುವಾರ   ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ […]

(Udupi) ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಆತ್ರಾಡಿ – ಮಂಗಳೂರು ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಹಾಗೂ ಕಿರು ಸೇತುವೆ ನಿರ್ಮಾಣಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದ್ದು, ಭಾನುವಾರ   ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

 ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಪ್ರವೀಣ್ ಪೂಜಾರಿ, ಶ್ರೀಕಾಂತ್ ಕಾಮತ್, ಸುಂದರ್ ಮೂಲ್ಯ, ವಾಸುದೇವ ಭಟ್, ವಿರೇಂದ್ರ ಪೂಜಾರಿ, ಹರೀಶ್ ಕುಲಾಲ್, ದಿನೇಶ್ ಕುಮಾರ್ ಪಟ್ಲ ಹಾಗೂ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಸೋಮನಾಥ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.