ಕಾಪು: ಶೇಕಡಾ ನೂರು ಫಲಿತಾಂಶ ಪಡೆದ ದಂಡತೀರ್ಥ ಶಾಲೆಗೆ ಗೌರವಾರ್ಪಣೆ
(Kaup) ಕಾಪು: ಉಡುಪಿಯ ಸೈಂಟ್ ಸಿಸಿಲಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ 2022 -23 ಮತ್ತು 2023-24 ರ ಸಾಲಿನಲ್ಲಿ ನೂರು ಶೇಕಡಾ ಫಲಿತಾಂಶ ಪಡೆದ ದಂಡತೀರ್ಥ ಶಾಲೆಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರು ನಗದು ಪುರಸ್ಕಾರ ಹಾಗೂ ಅಭಿನಂದನಾ ಫಲಕಗಳನ್ನು ನೀಡಿ ಗೌರವಿಸಿದರು.
ಸಭೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಡಿ. ಡಿ. ಪಿ. ಐ. ಗಣಪತಿ ಹಾಗೂ ವಿವಿಧ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದು, ಜಿಲ್ಲೆಯ ಸರಕಾರಿ, ಅನುದಾನಿತ,ಅನುದಾನ ರಹಿತ ಶಾಲೆಗಳ ಮುಖ್ಯಸ್ಥರುಗಳು ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಿದರು.
2023-24 ನೆಯ ಸಾಲಿನಲ್ಲಿ ಕಾಪುವಿನ ದಂಡತೀರ್ಥ ವಿದ್ಯಾಸಂಸ್ಥೆಯೂ ಕೂಡ ನೂರು ಶೇಕಡಾ ಫಲಿತಾಂಶ ಪಡೆದಿದ್ದು, ಉತ್ತಮ ಫಲಿತಾಂಶ ಗಳಿಸಲು ಕಾರಣರಾದ ವಿದ್ಯಾರ್ಥಿಗಳು, ಹೆತ್ತವರು ಹಾಗೂ ಶಿಕ್ಷಕರನ್ನು ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ ಪ್ರಶಾಂತ್ ಶೆಟ್ಟಿಯವರು ಅಭಿನಂದಿಸಿದರು.

