ಕಾಪು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ
ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಮುಖ್ಯ ಶಿಕ್ಷಕಿ ಶುಭ ಮೇಡಂ
(Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಬಿಸಿ ಟ್ರಸ್ಟ್ ಕಾಪು ವತಿಯಿಂದ ಹಾಗೂ ಸರಕಾರಿ ಪ್ರೌಢಶಾಲೆ ಪ್ರಕೃತಿ ಇಕೋ ಕ್ಲಬ್ ಸಹಭಾಗಿತ್ವದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶುಭ ಮೇಡಂ ವಹಿಸಿದ್ದರು.
ಕಾಪು ಕ್ಲಸ್ಟರ್ ಮಟ್ಟದ ನೋಡಲ್ ಅಧಿಕಾರಿ ಪ್ರತಿಭಾ ಮೇಡಂರವರು ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡುತ್ತಾ, ನಮ್ಮ ಸುತ್ತ ಮುತ್ತಲಿನ ಪರಿಸರವನ್ನೂ ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು. ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತಿದೆ. ಮಕ್ಕಳು ತಮ್ಮ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ ಒಂದು ಗಿಡ ನೆಡಬೇಕು ಎಂದರು.
ಕಾರ್ಯಕ್ರಮದಲ್ಲಿ ಇಕೋ ಕ್ಲಬ್ ನೋಡಲ್ ಅಧಿಕಾರಿ ಶಿಕ್ಷಕಿ ಚೈತ್ರ ಕುಂದರ್, ತಾಲೂಕು ಕೃಷಿ ಮೇಲ್ವಿಚಾರಕರಾದ ದೇವೇಂದ್ರ, ವಲಯ ಮೇಲ್ವಿಚಾರಕಿ ವೀಣಾ, ಸೇವಾ ಪ್ರತಿನಿಧಿ ಶ್ರೀಮತಿ ಜ್ಯೋತಿ, ಶಿಕ್ಷಕ ವೃಂದ, ಶಾಲಾ ಮಕ್ಕಳು ಉಪಸ್ತಿತರಿದ್ದರು.
ಪರಿಸರದ ಬಗ್ಗೆ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ, ಗಿಡನಾಟಿ ಮಾಡಲಾಯಿತು.

