• Home  
  • ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ತಾಲೂಕು ಮಟ್ಟದ ಮಹಿಳಾ ಸಮಾವೇಶ, ವಿಚಾರಗೋಷ್ಠಿ(Kaup: Taluk level women’s conference and seminar organized by Sri Kshetra Dharmasthala Rural Development Project)
- ಸಂಘ, ಸಂಸ್ಥೆಗಳು

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ತಾಲೂಕು ಮಟ್ಟದ ಮಹಿಳಾ ಸಮಾವೇಶ, ವಿಚಾರಗೋಷ್ಠಿ(Kaup: Taluk level women’s conference and seminar organized by Sri Kshetra Dharmasthala Rural Development Project)

Share: ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ತಾಲೂಕು ಮಟ್ಟದ ಮಹಿಳಾ ಸಮಾವೇಶ, ವಿಚಾರಗೋಷ್ಠಿ (Kaup) ಕಾಪು: ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್   ಹಾಗೂ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಇದರ ಸಹಯೋಗದೊಂದಿಗೆ ರವಿವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಕಾಪು ಇಲ್ಲಿ ತಾಲೂಕು ಮಟ್ಟದ ಮಹಿಳಾ ಸಮಾವೇಶ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ ಜರಗಿತು.  ಕಾರ್ಯಕ್ರಮವನ್ನು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿದರು. […]

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ತಾಲೂಕು ಮಟ್ಟದ ಮಹಿಳಾ ಸಮಾವೇಶ, ವಿಚಾರಗೋಷ್ಠಿ

(Kaup) ಕಾಪು: ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್   ಹಾಗೂ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಇದರ ಸಹಯೋಗದೊಂದಿಗೆ ರವಿವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಕಾಪು ಇಲ್ಲಿ ತಾಲೂಕು ಮಟ್ಟದ ಮಹಿಳಾ ಸಮಾವೇಶ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ ಜರಗಿತು.

 ಕಾರ್ಯಕ್ರಮವನ್ನು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿದರು.

 ಈ ಸಂದರ್ಭ ಅವರು ಮಾತನಾಡಿ, ಜ್ಞಾನ ವಿಕಾಸದ ಮೂಲಕ ಮಹಿಳೆಯರಲ್ಲಿ ಜಾಗೃತಿಯ ಕಾರ್ಯ ನಡೆಯುತ್ತಿದೆ. ಭಾರತದಲ್ಲಿ ತಾಯಂದಿರಿಂದ ಕುಟುಂಬ ವ್ಯವಸ್ಥೆ ಉಳಿದಿದೆ. ದುಶ್ಚಟಗಳಿಗೆ ಬಲಿಯಾದವರ ದುಶ್ಚಟ ಬಿಡಿಸಿ ಅವರ ಕುಟುಂಬದಲ್ಲಿ ಸಂತಸ ತರಿಸುವ ಕಾರ್ಯ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುತ್ತಿದೆ.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣ ನಡೆಯುತ್ತಿದೆ ಎಂದರು.  

 ಕಾರ್ಯಕ್ರಮದಲ್ಲಿ ಕಾಪು ತಾಲೂಕು ಕೇಂದ್ರ ಸಮಿತಿಯ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಹಾಗೂ ಕಾಪು  ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

 ಕುಂದಾಪುರದ ಆಪ್ತ ಸಮಾಲೋಚಕಿ ಶ್ರೀಮತಿ

ಸ್ವರ್ಣರವರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ವಿಚಾರ ಮಂಡಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಸದಸ್ಯರಿಂದ ನೃತ್ಯ ಕಾರ್ಯಕ್ರಮ, ಕುಣಿತ ಭಜನೆ ನೆರವೇರಿತು.

ವೇದಿಕೆಯಲ್ಲಿ ಕಾಪು ತಹಶಿಲ್ದಾರ್ ಪ್ರತಿಭಾ ಆರ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಕರಾವಳಿ ಪ್ರಾದೇಶಿಕ ಕಛೇರಿ ಉಡುಪಿಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ಉಡುಪಿ ಜಿಲ್ಲಾ ಯೋಜನಾಧಿಕಾರಿ ಮಮತಾ ಶೆಟ್ಟಿ, ನವೀನ್‌ ಅಮೀನ್‌ ಶಂಕರಪುರ ಉಪಸ್ಥಿತರಿದ್ದರು.

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ಸ್ವಾಗತಿಸಿದರು.

ಮೂಡುಬೆಳ್ಳೆ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಜಾತಾ ಸುವರ್ಣ ವಂದಿಸಿದರು.  

 ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪುಷ್ಪ ಗುಚ್ಛ ಸ್ಪರ್ಧೆ, ರಂಗೋಲಿ ಸ್ಪರ್ಧೆ ನಡೆಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.