ಕಾಪು: ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಹೊಸ ಮಾರಿಗುಡಿ ಆಡಳಿತ ಮಂಡಳಿಯ ಸದಸ್ಯರಿಂದ ಉರುಳು ಸೇವೆ (Kaup: Urulu Seva performed by members of the Sri Hosa Marigudi Management Board at Sri Lakshmi Janardhana Temple)

ಕಾಪು: ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಹೊಸ ಮಾರಿಗುಡಿ ಆಡಳಿತ ಮಂಡಳಿಯ ಸದಸ್ಯರಿಂದ ಉರುಳು ಸೇವೆ
(Kaup) ಕಾಪು: ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿದಾನದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಿಬ್ಬಂದಿಗಳಿಂದ ಉರುಳು ಸೇವೆ ಸೋಮವಾರ ನೆರವೇರಿತು.
ಕಾಪು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಪ್ರತಿಷ್ಠಾದಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಇದೇ ಬರುವ ಫೆಬ್ರವರಿ 25ರಿಂದ ಮಾರ್ಚ್ 5ರ ವರೆಗೆ ಅತ್ಯಂತ ವಿಜೃಂಭಣೆಯಿಂದ ಜರಗಲಿದೆ.
ಜೀರ್ಣೋದ್ಧಾರ ಕಾರ್ಯಗಳಿಗೆ ವೇಗ ಹೆಚ್ಚಿಸುವ ನಿಟ್ಟಿನಲ್ಲಿ 2019ರ ಜನವರಿ 18 ರಂದು ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮಿ ಜನಾರ್ದನ ದೇವರ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಭಿವೃದ್ಧಿ ಸಮಿತಿ ವ್ಯವಸ್ಥಾಪನಾ ಸಮಿತಿ ಮತ್ತು ಸಿಬ್ಬಂದಿಗಳು ಉರುಳು ಸೇವೆಯನ್ನು ಮಾಡಿದ್ದರು. ಅದರಂತೆ ಇದೀಗ ಪ್ರಥಮ ಹಂತದ ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿ ಅಮ್ಮನ 9 ದಿನಗಳ ಧಾರ್ಮಿಕ ಕಾರ್ಯಕ್ರಮ, ಅನ್ನಪ್ರಸಾದ, ಭಜನಾ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಂಗವಾಗಿ ನೆರವೇರುವಂತೆ, ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪ್ರಾರ್ಥಿಸಿ ಉರುಳು ಸೇವೆಯನ್ನು ಮಾಡಲಾಯಿತು.
ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸಮಿತಿ ಸದಸ್ಯರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ರಘುರಾಮ್ ಶೆಟ್ಟಿ, ದಿವಾಕರ ಶೆಟ್ಟಿ ಕಾಪು, ಹರೀಶ್ ನಾಯಕ್, ರಮೇಶ್ ಹೆಗ್ಡೆ ಕಲ್ಯ, ರಮೇಶ್ ಶೆಟ್ಟಿ ಕಾಪು ಕೊಲ್ಯ, ಜಗದೀಶ್ ಬಂಗೇರ, ಪ್ರಭಾತ್ ಶೆಟ್ಟಿ ಮೂಳೂರು, ಸಂತೋಷ್ ಶೆಟ್ಟಿ ಕಳತ್ತೂರು, ಶ್ರೀಧರ ತಂತ್ರಿ, ಸಿಬ್ಬಂದಿಗಳಾದ ಗೋವರ್ಧನ್ ಶೇರಿಗಾರ್, ಲಕ್ಷ್ಮಣ ಶೆಟ್ಟಿ ಮಂಡೇಡಿ ಮತ್ತಿತರರು ಉಪಸ್ಥಿತರಿದ್ದರು.