ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಉಚ್ಚಿಲ ಬಡಾ ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ (Kapu Sri Hosa Marigudi village comity at Uchila Bada)
ಉಚ್ಚಿಲ; ಕಾಪು ಹೊಸ ಮಾರಿಗುಡಿ ದೇವಸ್ಥಾನದ (Kaup sri Hosa Marigudi Temple) ಜೀರ್ಣೋದ್ಧಾರದ ಅಂಗವಾಗಿ ಉಚ್ಚಿಲ ಬಡಾ ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು.
ಪ್ರಾರ್ಥನೆಯೊಂದಿಗೆ ಒಂಬತ್ತು ಜನ ಮಹಿಳೆಯರಾದ ರಂಜಿತಾ ಗೋವಿಂದರಾಜ್ ಭಟ್, ಇಂದಿರಾ ಶೆಟ್ಟಿ, ರೇಣುಕಾ, ಮೋಹಿನಿ ಮಾಧವ, ಮಮತಾ ಪೂಜಾರಿ, ಜಯಂತಿ, ಸುಲೋಚನಾ ದೇವಾಡಿಗ, ಸುನಿತಾ ಮತ್ತು ಮೋಹಿನಿ ರಮೇಶ್ ಯವರು ಏಕಕಾಲದಲ್ಲಿ ದೀಪ ಬೆಳಗಿಸಿ ಆರತಿ ಎತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಜೀರ್ಣೋದ್ಧಾರದ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ (Balaji Yogish V Shetty) ಪ್ರಾಸ್ತಾವಿಕವಾಗಿ ದೇವಳ ನಿರ್ಮಾಣದ ಜೊತೆಗಿರುವ ಯೋಜನೆಗಳು, ಶಿಲಾಸೇವೆಯ ಮಹತ್ವದ ಬಗ್ಗೆ ಮಾತನಾಡಿದರು.
ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾರವರ ಉಪಸ್ಥಿತಿಯಲ್ಲಿ ಗ್ರಾಮ ಸಮಿತಿಯನ್ನು ರಚನೆ ಮಾಡಿ, ಉಚ್ಚಿಲ ಗ್ರಾಮದ 9 ಜನ ಪುರುಷರ 1 ತಂಡ, 9 ಜನ ಮಹಿಳೆಯರ 2 ತಂಡ ರಚಿಸಲಾಯಿತು.
ಆಯ್ಕೆಯಾದವರು ಹೊಸ ಮಾರಿಗುಡಿ ದೇವಳದ ಜೀರ್ಣೋದ್ಧಾರದ ಬಗ್ಗೆ ಗ್ರಾಮದ ಪ್ರತಿ ಮನೆ ಮನೆಗೂ ಸುದ್ದಿ ತಲುಪಿಸುವ ಜವಾಬ್ದಾರಿಯನ್ನು ವಹಿಸಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಪ್ರಧಾನ ಸಂಚಾಲಕ ಅರುಣ್ ಶೆಟ್ಟಿ ಪಾದೂರು (Arun Shetty Padur) , ದೇವಳದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ ಆಚಾರ್ಯ, ಪ್ರಭಾತ್ ಶೆಟ್ಟಿ ಮೂಳೂರು, ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ಮಾಜಿ ಸದಸ್ಯರಾದ ವಸಂತ ದೇವಾಡಿಗ, ಮಾಜಿ ಉಪಾಧ್ಯಕ್ಷರಾದ ಶಕುಂತಲಾ ಮತ್ತು ಇಂದಿರಾ ಶೆಟ್ಟಿ ಉಪಸ್ಥಿತರಿದ್ದರು.

