ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಆನೆಗುಂದಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿ ಭೇಟಿ, ಕಾಮಗಾರಿ ವೀಕ್ಷಣೆ (Sri Kala Hatendra Swamiji visit Kaup Hosa Marigudi Temple)
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಆನೆಗುಂದಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿ ಭೇಟಿ, ಕಾಮಗಾರಿ ವೀಕ್ಷಣೆ
(Kaup)ಕಾಪು : ಈಳೆಕಲ್ ಶಿಲೆಯಿಂದ ನಿರ್ಮಾಣಗೊಂಡಿರುವ ಮತ್ತು ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕಟಪಾಡಿ – ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ದೇವಳದ ಕಾಮಗಾರಿ ವೀಕ್ಷಿಸಿದರು.
ದೇವಳಕ್ಕೆ ಆಗಮಿಸಿದ ಸ್ವಾಮೀಜಿಯವರನ್ನು ಪೂರ್ಣಕುಂಭ, ಪಾದಪೂಜೆಯೊಂದಿಗೆ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಪದಾಧಿಕಾರಿಗಳು ಹಾಗೂ ಸದಸ್ಯರು ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ತಂತ್ರಿವರ್ಯರಾದ ಕುಮಾರಗುರು ತಂತ್ರಿಯವರು ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.
ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಮಾಧವ ಆರ್ ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ರಘುಪತಿ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ, ರತ್ನಾಕರ ಶೆಟ್ಟಿ ನಡಿಕೆರೆ, ಜಯರಾಮ ಆಚಾರ್, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ, ದೇವಳದ ಪ್ರಬಂಧಕ ಗೋವರ್ಧನ ಶೇರಿಗಾರ, ದೇವಳದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿ, ಭಕ್ತಾಧಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.