ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ : ಒಂಬತ್ತನೇ ದಿನದ ಧಾರ್ಮಿಕ ಸಭೆ ಸಂಪನ್ನ
(Kaup)ಕಾಪು: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ನಡೆದ ನಡೆದ ಸಭಾ ಕಾರ್ಯಕ್ರಮದಲ್ಲಿ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಆನಂತಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿ ಹಾಗೂ ಜಗದ್ಗುರು ಶ್ರೀ ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನಂ ಪಲಿಮಾರು ಹೃಷಿಕೇಶ ತೀರ್ಥ ಮಠದ ಶ್ರೀ ವಿಧ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಈ ಸಂದರ್ಭ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಉದ್ಯಮಿಗಳಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ಶೆಟ್ಟಿ, ಕಾಪು ತಹಶೀಲ್ದಾರರಾದ ಪ್ರತಿಭಾ ಆರ್ ಹಾಗೂ ಗಣ್ಯರು ಉಪಸ್ಥಿತರಿದ್ದರು

