ಕಾಪು ಶ್ರೀ ಹೊಸಮಾರಿಗುಡಿ : ನಟಿ ದೀಪಿಕಾ ದಾಸ್ ಭೇಟಿ, ಪ್ರಾರ್ಥನೆ
(Kaup) ಕಾಪು : ಚಿತ್ರೀಕರಣಕ್ಕಾಗಿ ಉಡುಪಿ ಪರಿಸರಕ್ಕೆ ಬಂದಿದ್ದ ನಟಿ ದೀಪಿಕಾ ದಾಸ್ ಅವರು ಕಾಪುವಿನ ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದ ಅವರನ್ನು ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಗೌರವಿಸಲಾಯಿತು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ವಿಶೇಷ ಪೂಜೆ ಸಲ್ಲಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ರವೀಂದ್ರ ಮಲ್ಲಾರ್, ಕಾಪು ಜಯರಾಮ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

