ಕಾಪು ಶ್ರೀ ಹೊಸ ಮಾರಿಗುಡಿಗೆ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಭೇಟಿ (Dr. Vishwa Santhosh Bharati Guruji visit Kaup Hosa Marigudi)
ಕಾಪು ಶ್ರೀ ಹೊಸ ಮಾರಿಗುಡಿಗೆ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಭೇಟಿ
ಕಾಪು, ಡಿ. 18 : ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಗೆ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಮಂಗಳವಾರ ಭೇಟಿ ನೀಡಿ, ಸಮಗ್ರ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಹೊಸ ಮಾರಿಗುಡಿ ದೇವಸ್ಥಾನದ ತಂತ್ರಿ ಕುಮಾರ ಗುರು ತಂತ್ರಿ, ಪ್ರಧಾನ ಅರ್ಚಕ ವೇದಮೂತ್ರಿ ಶ್ರೀನಿವಾಸ ತಂತ್ರಿ ಕಲ್ಯರವರು ವಿಶೇಷ ಪೂಜೆ ಸಲ್ಲಿಸಿ ದೇವರ ಪ್ರಸಾದ ನೀಡಿ ಗೌರವಿಸಿದರು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರು ಜೀರ್ಣೋದ್ಧಾರದ ಕುರಿತಾಗಿ ಮಾಹಿತಿ ನೀಡಿದರು.
ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಮಾಜಿ ಶಾಸಕ ಕೆ. ರಘುಪತಿ ಭಟ್, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ರವಿ ಸುಂದರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಮನೋಹರ ಶೆಟ್ಟಿ ಕಾಪು, ಕಾರ್ಯ ನಿರ್ವಹಣಾಧಿಕಾರಿ ಮತ್ತು ಕೋಶಾಧಿಕಾರಿ ರವಿಕಿರಣ್, ಉದಯ ಸುಂದರ ಶೆಟ್ಟಿ, ಯೋಗೀಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ಸಾಲ್ಯಾನ್, ಮನೋಹರ ರಾವ್, ರವೀಂದ್ರ ಮಲ್ಲಾರು, ಮಾಧವ ಆರ್. ಪಾಲನ್, ಜಯಲಕ್ಷ್ಮೀ ಎಸ್. ಶೆಟ್ಟಿ, ಚರಿತಾ ಶಶಿಧರ್, ಪ್ರಮುಖರಾದ ಗೀತಾಂಜಲಿ ಎಂ. ಸುವರ್ಣ, ರಘುರಾಮ ಶೆಟ್ಟಿ, ಮಧುಕರ್ ಎಸ್., ರಮೇಶ್ ಶೆಟ್ಟಿ ಕೊಲ್ಯ, ಜಯರಾಮ ಆಚಾರ್ಯ, ಮಾರಿಗುಡಿಯ ಪ್ರಬಂಧಕ ಗೋವರ್ಧನ್ ಶೇರಿಗಾರ ಮತ್ತಿತರರು ಉಪಸ್ಥಿತರಿದ್ದರು.