# Tags
#ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ದಂಪತಿ, ನಟ ರಕ್ಷಿತ್ ಶೆಟ್ಟಿ ಭೇಟಿ (Former Union Minister Janardana Pujari and actor Rakshit Shetty visit Kapu Sri Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ದಂಪತಿ, ನಟ ರಕ್ಷಿತ್ ಶೆಟ್ಟಿ ಭೇಟಿ

(Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ದಂಪತಿ ಹಾಗೂ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ತಾಯಿಯೊಂದಿಗೆ ಸೋಮವಾರ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದರು.

 ದೇವಳದ ಪ್ರಧಾನ ಅರ್ಚಕರಾದ ವೇ.ಮೂ. ಕಲ್ಯ ಶ್ರೀನಿವಾಸ ತಂತ್ರಿರವರು ವಿಶೇಷ ಪೂಜೆ ಸಲ್ಲಿಸಿ ಮಾರಿಯಮ್ಮನ ಪ್ರಸಾದ ನೀಡಿದರು.

ಕ್ಷೇತ್ರದ ವತಿಯಿಂದ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಗೌರವಿಸಿದರು.

ಜನಾರ್ಧನ ಪೂಜಾರಿ ಮತ್ತು ರಕ್ಷಿತ್‌ ಶೆಟ್ಟಿಯವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಪುನರ್‌ನಿರ್ಮಾಣಗೊಂಡ ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಅನ್ನಪ್ರಸಾದ ಸ್ವೀಕರಿಸಿದರು.

 ಈ ಸಂದರ್ಭ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಮೇಶ್ ಹೆಗ್ಡೆ ಕಲ್ಯ, ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾವಿರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3