ಕಾಪು ಶ್ರೀ ಹೊಸ ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ, ಪ್ರಾರ್ಥನೆ
(Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಚಿತ್ರನಟ ದಿ. ಡಾ. ಪುನೀತ್ ರಾಜಕುಮಾರ್‌ರವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್‌ರವರು ತನ್ನ ಪುತ್ರಿ ವಂದಿತಾ ರಾಜ್ ಕುಮಾರ್ ಮತ್ತವರ ಸ್ನೇಹಿತೆಯೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ದೇವಿಯ ಮುಖದಲ್ಲಿ ಆಕರ್ಷಣೆಯಿದೆ, ಇಲ್ಲಿಗೆ ಬಂದರೆ ನನ್ನ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
