ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ
(Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಸವಣೂರು ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದು ನೂತನ ದೇಗುಲದ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾರವರು ನ್ಯಾಯಾಧೀಶರಿಗೆ ಮಾರಿಯಮ್ಮನ ಅನುಗ್ರಹ ಪ್ರಸಾದ ನೀಡಿ ಹರಸಿದರು.
ಅಭಿವೃದ್ಧಿ ಸಮಿತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ನೂತನ ದೇಗುಲದ ಕಾಮಗಾರಿಯನ್ನು ವೀಕ್ಷಿಸಿದ ನ್ಯಾಯಾಧೀಶರಿಗೆ ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನವಿತ್ತರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಮನೋಹರ್ ಎಸ್. ಶೆಟ್ಟಿ, ಸುಧಾಕರ ಶೆಟ್ಟಿ , ಉಮೇಶ್ ಶೆಟ್ಟಿ ಕಳತ್ತೂರು, ಮೋಹನ್ ಬಂಗೇರ, ಸಂತೋಷ್ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಶೋಭಿತ್ ಶೆಟ್ಟಿ, ಮಧುಕರ್ ಎಸ್., ಉದಯ ಭಾರ್ಗವ, ಸಂತೋಷ್ ಶೆಟ್ಟಿ ಕಾಪು, ಜಯಕರ ಶೆಟ್ಟಿಗಾರ್, ಶಿವಣ್ಣ ಎಸ್. ಅಂಚನ್, ಸಂದೀಪ್ ಕುಮಾರ್, ಸೋಮನಾಥ್ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

