ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ (Navadurga article yajna at Kaup Hosa Mari Gudi)
ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ
(Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಲೋಕ ಕಲ್ಯಾಣಾರ್ಥ ಮತ್ತು ಸಾನಿಧ್ಯ ವೃದ್ಧಿಗಾಗಿ ನವದುರ್ಗಾ ಲೇಖನ ಯಜ್ಞ ಪ್ರಯುಕ್ತ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ದೇಶ ವಿದೇಶದ ಭಕ್ತರನ್ನು ಒಂದುಗೂಡಿಸುವ ಪ್ರಯತ್ನಕ್ಕೆ ಕಾಪು ಶ್ರೀ ಹೊಸಮಾರಿಗುಡಿ ನಾಂದಿ ಹಾಡಿದೆ ಎಂದರು.
ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ, ದಾರಿ ತಪ್ಪುತ್ತಿರುವ ಯುವ ಪೀಳಿಗೆಗೆ ಭಜನೆ ಅನಿವಾರ್ಯ. ಧರ್ಮ ಮತ್ತು ದೇವರ ಬಗೆಗಿನ ಭಕ್ತಿಯು ನಮ್ಮನ್ನು ಸರಿ ದಾರಿಯತ್ತ ನಡೆಯಲು ಪ್ರೇರಕವಾಗಿದೆ ಎಂದರು.
ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನ ಕೋಶಾಧಿಕಾರಿ ಪದ್ಮರಾಜ್ ರಾಮಯ್ಯ, ಲೇಖಕಿ ವೀಣಾ ಬನ್ನಂಜೆ, ಪಡುಬಿದ್ರಿ ಪಂಚಕಾಡು ಕೊರಗ ಕುಟುಂಬ ಗುರಿಕಾರ ಬಾಲರಾಜ್ ಕೋಡಿಕಲ್, ಶಿಕ್ಷಣ ತಜ್ಞೆ ಮಾಲಿನಿ ಹೆಬ್ಬಾರ್ ಮಾತನಾಡಿದರು.
ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇ.ಮೂ.ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿತು.
ಸಮಿತಿ ಕಾರ್ಯಾಧ್ಯಕ್ಷ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಕೆ. ರಘುಪತಿ ಭಟ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್., ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ರವಿಕಿರಣ್ ಕೆ., ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಕೆ.ಮನೋಹರ ಎಸ್. ಶೆಟ್ಟಿ, ಮಾಧವ ಆರ್.ಪಾಲನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಮಲ್ಲಾರು, ಹುಬ್ಬಳ್ಳಿ ಸಮಿತಿಯ ಸುಗ್ಗಿ ಸುಧಾಕರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ ಡಿ. ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ, ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಡಾ. ವಿದ್ಯಾ ಶಂಕರ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಕೆ. ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಮಂಜ, ಸುವರ್ಧನ್ ನಾಯಕ್ ಉಪಸ್ಥಿತರಿದ್ದರು.
ನವದುರ್ಗಾ ಲೇಖನ ಸಮಿತಿ ಕಾರ್ಯಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು ಸ್ವಾಗತಿಸಿದರು. ದಾಮೋದರ ಶರ್ಮ ನಿರೂಪಿಸಿದರು.