ಕಾಪು ಶ್ರೀ ಹೊಸ ಮಾರಿಗುಡಿ: ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ (Kaup Sri New Marigudi: South Channel Green Horekanike)

ಕಾಪು ಶ್ರೀ ಹೊಸ ಮಾರಿಗುಡಿ : ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ
(Kaup)ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಿಂದ ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ಗಣ್ಯರು ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.
ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮುಲ್ಕಿ, ಮೂಡಬಿದ್ರಿ ಹಾಗೂ ವಿವಿಧ ಪ್ರದೇಶಗಳಿಂದ ಹೊರೆಕಾಣಿಕೆ ಸಮರ್ಪಣೆಯು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿಯ ಮೂಲಕ, ಮೂಳೂರು ಕೊಪ್ಪಲಂಗಡಿಗೆ ತಲುಪಿತು. ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಕಾಪು ಪೇಟೆಯಾಗಿ ಹೊಸಮಾರಿಗುಡಿ ದೇವಳವನ್ನು ತಲುಪಿತು.
ಮೆರವಣಿಗೆಯಲ್ಲಿ ಕುಣಿತ ಭಜನೆ, ಡೋಲು ವಾದನ, ತಾಲೀಮು, ಎರ್ಮಾಳು ಬ್ಯಾಂಡ್, ಮಕ್ಕಳಿಂದ ಜಾಗಟೆ ಮತ್ತು ಶಂಖನಾದ, ಕೊಂಬು, ಬಿರುದಾವಳಿ, ಕೀಳು ಕುದುರೆ, ಸ್ಪಷಲ್ ಬ್ಯಾಂಡ್, ಮಹಿಳಾ ಚೆಂಡೆ, ಮಹಿಷಮರ್ಧಿನಿ ಟ್ಯಾಬ್ಲೋ, ಕಳತ್ತೂರು ಡೋಲು, ಕಟೀಲು ಚೆಂಡೆ ಸಹಿತ ವಿವಿಧ ವೇಷಗಳು ಮೆರವಣಿಗೆಯಲ್ಲಿ ರಂಗು ತಂದಿತು. ಕೇಸರಿ ಪೇಟ ತೊಟ್ಟ ಪುರಷರು ಮತ್ತು ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡರು.
ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ , ಮಾಣಿಲ ಶ್ರೀದಾಮದ ಮೋಹನದಾಸ ಸ್ವಾಮೀಜಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯೆ ವಿಜಯಲಕ್ಷ್ಮೀ ಶೆಟ್ಟಿ, ಜಾಗತಿಕ ಬಂಟರ ಸಂಗದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಹೊರೆಕಾಣಿಕೆ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣಾ ಮೆರವಣಿಗೆ ಸಮಿತಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಉಪಸ್ಥಿತರಿದ್ದರು