# Tags
#ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ (Kapu Sri Hosa Marigudi Temple: Religious program on the occasion of Brahmakalashotsavam)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ

(Kaup) ಕಾಪು: ಸಂಪೂರ್ಣ ಶಿಲಾಮಯಗೊಂಡು ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಪುನ:ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

 ಕಾಪು ಪಡುವಿನ ಶ್ರೀಧೂಮಾವತಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಗಣ ಹೋದಿ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

 ದೇವಳದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರ ಪೌರೋಹಿತ್ಯದಲ್ಲಿ ಪೂಜಾ ವಿಧಿ ವಿಧಾನ ಸಂಪನ್ನಗೊಂಡಿತು.

  ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಶ್ರೀಮತಿ ಬೀನಾ ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸಮಿತಿ ಸದಸ್ಯರಾದ,  ದಿವಾಕರ ಶೆಟ್ಟಿ ಕಾಪು, ಶ್ರೀಮತಿ ವಿಜಯಲಕ್ಷ್ಮಿ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಜಗಧೀಶ್‌ ಬಂಗೇರಾ, ಮಾಧವ ಪಾಲನ್‌, ಯೋಗೀಶ್‌ ಶೆಟ್ಟಿ, ಶ್ರೀಮತಿ ಗೀತಾಂಜಲಿ ಸುವರ್ಣ, ಶ್ರೀಮತಿ ಶಿಲ್ಪಾ ಸುವರ್ಣ, ಪ್ರಭಾತ್ ಶೆಟ್ಟಿ ಮೂಳೂರು, ಸಿಬ್ಬಂದಿಗಳಾದ ಗೋವರ್ಧನ್ ಶೇರಿಗಾರ್, ಲಕ್ಷ್ಮಣ ಶೆಟ್ಟಿ ಮಂಡೇಡಿ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3