ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ
(Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ಮಾರಿಯಮ್ಮನ ದರ್ಶನ ಪಡೆದರು.
ದೇವಳದ ಪ್ರದಾನ ತಂತ್ರಿಗಳಾದ ಕುಮಾರ ಗುರು ತಂತ್ರಿಯವರು ವಿಷೇಶ ಪ್ರಾರ್ಥನೆ ಸಲ್ಲಿಸಿ, ಶಿಲ್ಪಾ ಶೆಟ್ಟಿಯವರಿಗೆ ಪ್ರಸಾದ ವಿತರಿಸಿದರು.
ಈ ಸಂದರ್ಭ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
