(Kaup) ಕಾಪು : ಕರ್ನಾಟಕ ಸರಕಾರದ ಮಾಜಿ ಸಚಿವರಾದ ಅರವಿಂದ್ ಲಿಂಬಾವಳಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು,
ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸದೇವ ಶೆಟ್ಟಿಯವರ ಸಮ್ಮುಖದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ಪ್ರಾರ್ಥಿಸಿ, ಅಮ್ಮನ ಅನುಗ್ರಹ ಪ್ರಸಾದ ನೀಡಿದರು, ನಂತರ ಸಮಿತಿಯ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭ ದೇವಳದ ಸಮಗ್ರ ಜಿರ್ಣೋದ್ಧಾರಕ್ಕೆ 99 ಶಿಲೆ ನೀಡುವ ಮೂಲಕ, ನವದುರ್ಗಾ ಲೇಖನ ಯಜ್ಞವನ್ನು ಬರೆಯುವುದಾಗಿ ಸಂಕಲ್ಪ ಮಾಡಿ ಪುಸ್ತಕವನ್ನು ಪಡೆದುಕೊಂಡರು.
ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಕೆ. ರಘುಪತಿ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯೆ ಜಯಲಕ್ಷ್ಮಿ ಎಸ್. ಶೆಟ್ಟಿ, ಪ್ರಚಾರ ಸಮಿತಿಯ ಸಂಚಾಲಕ ಜಯರಾಮ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್ ಮತ್ತು ಪ್ರಬಂಧಕ ಗೋವರ್ಧನ್ ಶೇರಿಗಾರ್ ಉಪಸ್ಥಿತರಿದ್ದರು.

