# Tags
#ಧಾರ್ಮಿಕ #ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ (Inauguration of Brahma kalasha Samithi, Navadugra Lekhana Samiti and Media Centre at Kaup Sri hosa marigudi Temple)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ

(Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ನೂತನವಾಗಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಲಯ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನೆಗೊಂಡಿತು.

 ಕಟಪಾಡಿ – ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು   ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಲಯ ಮತ್ತು  ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ ಉದ್ಘಾಟಿಸಿ ಶುಭ ಹಾರೈಸಿದರು.

 ಮಾಧ್ಯಮ ವಿಭಾಗವನ್ನು ಉದಯವಾಣಿಯ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿರುವ, ಕಾಪು ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯ ನಿರ್ವಿಘ್ನವಾಗಿ ಸಾಗಲಿ ಎಂದು ಹಾರೈಸಿದರು.

ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಮಾಧವ ಆರ್ ಪಾಲನ್, ದೇವಳದ ತಂತ್ರಿ ವೇಮೂ. ಕುಮಾರಗುರು ತಂತ್ರಿ, ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ರಘುಪತಿ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್‌ ಹೆಜ್ಮಾಡಿ, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ, ರತ್ನಾಕರ ಶೆಟ್ಟಿ ನಡಿಕೆರೆ, ಜಯರಾಮ ಆಚಾರ್‌, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ ದೇವಳದ ಪ್ರಬಂಧಕ ಗೋವರ್ಧನ ಶೇರಿಗಾರ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2