# Tags
#ಧಾರ್ಮಿಕ #ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಫೆಬ್ರವರಿ 22 ಮತ್ತು 23ರಂದು ಬೃಹತ್ ಹಸಿರುವಾಣಿ ಹೊರೆ ಕಾಣಿಕೆ (Kaup Sri Hosa Marigudi Temple: Huge Green Lantern Offering on February 22nd and 23rd)

kaup hosa marigudi temple

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಫೆಬ್ರವರಿ 22 ಮತ್ತು 23ರಂದು ಬೃಹತ್ ಹಸಿರುವಾಣಿ ಹೊರೆ ಕಾಣಿಕೆ

(Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆಬ್ರವರಿ 22 ಮತ್ತು 23ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಲಿದೆ ಎಂದು ಹೊರೆಕಾಣಿಕೆ ಸಮರ್ಪಣಾ ಸಮಿತಿಯ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿ ಹೇಳಿದ್ದಾರೆ.

ಅವರು ಶುಕ್ರವಾರ ಸಂಜೆ  ಬ್ರಹ್ಮಕಲಶೋತ್ಸವ ಸಮಿತಿಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

 ಫೆಬ್ರವರಿ 22ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ದಕ್ಷಿಣ ವಾಹಿನಿ ಹೊರೆಕಾಣಿಕೆ ಸಮರ್ಪಣೆಯು ಹೆಜಮಾಡಿ ಗಡಿ ದಾಟಿ ಕೊಪ್ಪಲಂಗಡಿಗೆ ಆಗಮಿಸಲಿದೆ. ಅಲ್ಲಿಂದ ಎಲ್ಲವನ್ನೂ ಶೇಕರಿಸಿ, ಮಾರಿಗುಡಿ ದೇವಳಕ್ಕೆ ಮೆರವಣಿಗೆಯಲ್ಲಿ ತರಲಾಗುವುದು.

 ಫೆಬ್ರವರಿ 23ರಂದು ಉಡುಪಿ ಜಿಲ್ಲೆಯಿಂದ ಸಮರ್ಪಿಸಲ್ಪಡುವ ಉತ್ತರವಾಹಿನಿ ಹೊರೆಕಾಣಿಕೆಯು ಪಾಂಗಾಳ ಸೇತುವೆ ಬಳಿಯಲ್ಲಿ ಶೇಖರಿಸಿ ಅಲ್ಲಿಂದ ಮೆರವಣಿಗೆಯಲ್ಲಿ ಹೊಸ ಮಾರಿಗುಡಿ ತಲುಪಲಿದೆ.

 ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ಸಂದರ್ಭದಲ್ಲಿ  ವಿವಿಧ ಬಿರುದಾವಾಳಿಗಳೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ.

ಮೆರವಣಿಗೆಯಲ್ಲಿ ಹದಿನೈದು ಸಾವಿರಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸಲಿದ್ದಾರೆ ಎಂದೂ ಡಾ. ದೇವಿಪ್ರಸಾದ್‌ ಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಪಾದೂರು, ಉಪಾಧ್ಯಕ್ಷರಾದ ಶ್ರೀಕರ ಶೆಟ್ಟಿ ಕಲ್ಯ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಧವ ಪಾಲನ್, ಯೋಗೀಶ್ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಮೋಹನ ಬಂಗೇರ, ಶಾಂತಲತಾ ಶೆಟ್ಟಿ, ಅನಿಲ್ ಕುಮಾರ್, ಅವಿನಾಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3