# Tags
#ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆ (Kaup Sri New Marigudi: Meeting to review preparations for the prestigious Brahma Kalashotsava)

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆ

(Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾರ್ಚ್ 5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆಯು ರವಿವಾರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ಆರ್.ಜಿ ಗ್ರೂಫ್ಸ್ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

 ಕಾಪುವಿನ‌ ಅಮ್ಮನ ಜೀರ್ಣೋದ್ಧಾರ ಅದ್ಭುತವಾಗಿ ಮೂಡಿ ಬಂದಿದೆ. ಬ್ರಹ್ಮಕಲಶೋತ್ಸವವೂ ಶಿಸ್ತುಬದ್ದವಾಗಿ, ಯಶಸ್ವಿಯಾಗಿ ನಡೆಯ ಬೇಕಿದೆ. ಅದಕ್ಕಾಗಿ  ನಾವೆಲ್ಲರೂ ಶ್ರಮಿಸೋಣ ಎಂದರು.

 ಬ್ರಹ್ಮಕಲಶೋತ್ಸವ ಪ್ರಯುಕ್ತ ಸ್ವಯಂ ಸೇವಕರಿಗೆ ಎಂ‌ಆರ್.ಜಿ ಗ್ರೂಫ್ ವತಿಯಿಂದ ನೀಡಲಾಗುವ ಕ್ಯಾಪ್ ಮತ್ತು ಟೀ ಶರ್ಟ್ ಅನಾವರಣಗೊಳಿಸಲಾಯಿತು.

 ಹೊಸ ಮಾರಿಗುಡಿ ದೇವಸ್ತಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿದರು.

  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ರಘಪತಿ ಭಟ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಪ್ರಮುಖರಾದ ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್ ಕುಮಾರ್ ಶೆಟ್ಟಿ, ಸಂದೀಪ್ ಶೆಟ್ಟಿ ಮುಂಬಯಿ, ಮಾಧವ ಆರ್. ಪಾಲನ್, ಭಗವಾನ್ ದಾಸ್ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.

 ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a comment

Your email address will not be published. Required fields are marked *

Emedia Advt3