ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ
(Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೋಮವಾರ ಚಪ್ಪರ ಮುಹೂರ್ತ ನೆರವೇರಿತು.
ವೇದಮೂರ್ತಿ ಕುಮಾರಗುರು ತಂತ್ರಿ ಹಾಗೂ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನೆರವೇರಿತು.
ವೇದಮೂರ್ತಿ ಕುಮಾರಗುರು ತಂತ್ರಿಯವರು ಶ್ರೀ ಮಾರಿಯಮ್ಮನ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಾಯಿತು.
ಚಪ್ಪರ ಮುಹೂರ್ತದ ಪ್ರಯುಕ್ತ ನೂತನ ದೇಗುಲದಲ್ಲಿ ಗಣ ಸೇವಾಧಿ ಕಾರ್ಯ ನೆರವೇರಿತು.
ಈ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ದಂಪತಿಯವರು ಪೂಜಾ ಸಂಕಲ್ಪ ನೆರವೇರಿಸಿದರು.
ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಸ್ವರ್ಣ ಗದ್ದುಗೆ ಸಮಿತಿ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಮೊಗವೀರ ಮಹಾಜನಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ನವದುರ್ಗ ಲೇಖನ ಸಮಿತಿ ಅಧ್ಯಕ್ಷ ಮಾಜಿ ಶಾಸಕ ರಘುಪತಿ ಭಟ್, ಶ್ರೀ ಲಕ್ಷ್ಮೀ ಜನಾರ್ಧನ ದೇವಳದ ಮೊಕ್ತೇಸರ ಮನೋಹರ ಶೆಟ್ಟಿ, ಕಾಪು ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಹೊರೆ ಕಾಣಿಕೆ ಸಮಿತಿ ಕೋಶಾಧಿಕಾರಿಯಾಗಿ ಹರೀಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಪಾದೂರು, ಗೀತಾಂಜಲಿ ಸುವರ್ಣ, ಶಿಲ್ಪಾ ಗಂಗಾಧರ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
