• Home  
  •  ಕಾಪು ಹೊಸ ಮಾರಿಗುಡಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ (Legislative Council Speaker Basavaraj visits Kaup New Marigudi)
- ಧಾರ್ಮಿಕ

 ಕಾಪು ಹೊಸ ಮಾರಿಗುಡಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ (Legislative Council Speaker Basavaraj visits Kaup New Marigudi)

Share: ಕಾಪು ಹೊಸ ಮಾರಿಗುಡಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ  ಶ್ರೀ ಹೊಸ ಮಾರಿಗುಡಿಗೆ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ : ಹೊರಟ್ಟಿ (Kaup) ಕಾಪು : ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಉಡುಪಿ ಜಿಲ್ಲೆಯ ಕಾಪು   ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು.  ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು.  ಹೊಸ ಮಾರಿಗುಡಿಯ ಪ್ರಧಾನ […]

(Kaup) ಕಾಪು : ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಉಡುಪಿ ಜಿಲ್ಲೆಯ ಕಾಪು   ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು.

 ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು.

 ಹೊಸ ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ಮಾರಿಯಮ್ಮನ ಅನುಗ್ರಹ ಪ್ರಸಾದ ನೀಡಿದರು.

    ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ನನಗೆ ಇದು ಜೀವನದಲ್ಲಿ ಅತ್ಯಂತ ಶ್ರೇಷ್ಠವಾದ ದಿನ. ಇಂತಹ ಚರಿತ್ರೆಯುಳ್ಳ ದೇವಸ್ಥಾನಕ್ಕೆ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ಕೋಟಿ ದುಡ್ಡು ಕೊಟ್ಟರೂ ಸಿಗದ ಮಾನಸಿಕ ನೆಮ್ಮದಿಯ ಅನುಭವವಾಗಿದೆ. ದೇಶದಲ್ಲಿ ರಾಜ್ಯದಲ್ಲಿ ಎಲ್ಲಿಯೂ ನಡೆಯದ ರೀತಿಯಲ್ಲಿ ಈ ದೇಗುಲದ ಜೀರ್ಣೋದ್ಧಾರ ನಡೆದಿದೆ. ಅ ತಾಯಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.

  ಈ ಸಂದರ್ಭದಲ್ಲಿ ಕಾಪು ಶಾಸಕ ಮತ್ತು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮಾಧವ ಆರ್. ಪಾಲನ್,   ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರು, ಮನೋಹರ ರಾವ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಗಣ್ಯರಾದ ರಮೇಶ್ ಹೆಗ್ಡೆ ಕಲ್ಯ, ಯೋಗೀಶ್ ವಿ. ಶೆಟ್ಟಿ, ಉದ್ಯಮಿ ಸುಗ್ಗಿ ಸುಧಾಕರ್ ಶೆಟ್ಟಿ, ಜಯರಾಮ್ ಆಚಾರ್ಯ, ಸಾವಿತ್ರಿ ಗಣೇಶ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್  ಹಾಗೂ ಮಾರಿಯಮ್ಮನ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.