# Tags
#ಧಾರ್ಮಿಕ

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ (Kaup Hosa Marigudi Temple : Swarna Gadduge Construction Commencement)

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ

(Kaup) ಕಾಪು, . 3 :  ಸಂಫೂರ್ಣವಾಗಿ ಪುನರ್‌ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ನೇತೃತ್ವದಲ್ಲಿ ಭಕ್ತಾಧಿಗಳ ಸಹಕಾರದೊಂದಿಗೆ ನಿರ್ಮಾಣಗೊಳ್ಳಲಿರುವ ನೂತನ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಗುರುವಾರ ಮುಹೂರ್ತ ನೆರವೇರಿಸಲಾಯಿತು.

ಉಡುಪಿಯ ಚಿನ್ನಾಭರಣ ಮಳಿಗೆ ಗುಜ್ಜಾಡಿ ಸ್ವರ್ಣ ಜ್ಯುವೆಲ್ಲರ್ಸ್‌ನ‌  ನೇತೃತ್ವದಲ್ಲಿ ಸುಮಾರು 20 ಕೆ.ಜಿ. ಚಿನ್ನ ಮತ್ತು 160 ಕೆ.ಜಿ. ಬೆಳ್ಳಿಯೊಂದಿಗೆ ಸ್ವರ್ಣ ಗದ್ದುಗೆ ನಿರ್ಮಾಣಗೊಳ್ಳಲಿದೆ. ಟೆಂಡರ್ ಮೂಲಕ ಗುತ್ತಿಗೆ ಪಡೆದುಕೊಂಡಿರುವ ಗುಜ್ಜಾಡಿ ಸ್ವರ್ಣ ಜ್ಯುವೆಲ್ಲರ್ಸ್‌ನ ದೀಪಕ್ ನಾಯಕ್ ಮತ್ತು ಶೈಲೇಶ್ ನಾಯಕ್ ಅವರಿಗೆ ಕಾಪು ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ಪ್ರಾರ್ಥಿಸಿ, ಸ್ವರ್ಣ ಗದ್ದುಗೆಯ ಕೆಲಸ ಆರಂಭಿಸಲು ಮುಹೂರ್ತ ನೆರವೇರಿಸಿ ಪ್ರಸಾದ ನೀಡಲಾಯಿತು.

ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ಮತ್ತು ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಕೆ., ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಕಾರ್ಯಾಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಕಾರ್ಯದರ್ಶಿ ರವಿ ಭಟ್ ಮಂದಾರ, ಪ್ರಮುಖರಾದ ಮನೋಹರ್ ಶೆಟ್ಟಿ, ಮಾಧವ ಪಾಲನ್, ಜಯರಾಮ ಆಚಾರ್ಯ, ಬೀನಾ ಶೆಟ್ಟಿ, ಅನುರಾಧ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಸಾವಿತ್ರಿ ಗಣೇಶ್, ಜಯಲಕ್ಷ್ಮೀ ಸುರೇಶ್ ಶೆಟ್ಟಿ,ರಮೇಶ್ ಶೆಟ್ಟಿ ಕಾಪು ಕೊಲ್ಯ, ಶೋಭಾ ರಮೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

. ೨೯ರವರೆಗೆ ಸ್ವರ್ಣ ಸಮರ್ಪಣೆಗೆ ಅವಕಾಶ : ನವದುರ್ಗಾ ಐಕ್ಯ ಸ್ವರೂಪಿಣೀ ಕಾಪು ಮಾರಿಯಮ್ಮನ ದೇವಸ್ಥಾನದ ನವ ನಿರ್ಮಾಣ ಕಾರ್ಯಗಳೊಂದಿಗೆ ನೂತನ ಸ್ವರ್ಣ ಗದ್ದುಗೆ ಸಮರ್ಪಣೆಗೆ ಯೋಜನೆ ಹಾಕಿಕೊಳ್ಳಲಾಗಿದೆ. ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಭಕ್ತರಿಗೆ 9 ಗ್ರಾಂ, 18 ಗ್ರಾಂ, 99 ಗ್ರಾಂ, 242 ಗ್ರಾಂ, 450 ಗ್ರಾಂ, 999 ಗ್ರಾಂ ಸ್ವರ್ಣ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಈಗಾಗಲೇ ಹೆಚ್ಚಿನ ಭಕ್ತರು ಸ್ವರ್ಣ ಸಮರ್ಪಣೆ ಮಾಡುತ್ತಿದ್ದಾರೆ. ಭಕ್ತರ ಅಪೇಕ್ಷೆಯ ಮೇರೆಗೆ ಸ್ವರ್ಣ ಸಮರ್ಪಣೆಗೆ ಅ. 29ರವರೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ತಿಳಿಸಿದೆ. 

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2