ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ (Kaup Hosa Marigudi Temple launches promotional vehicle for Brahma Kalashotsava)

ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ
(Kaup) ಕಾಪು : ಕಾಪು ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ. 22 ಮತ್ತು ಫೆ. 23ರಂದು ಬೃಹತ್ ಹಸುರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಲಿದ್ದು, ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಗೌರವಾಧ್ಯಕ್ಷ ಶಾಸಕ ಯಶಪಾಲ್ ಸುವರ್ಣ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಹೊರೆಕಾಣಿಕೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ,ಯವರು ತೆಂಗಿನ ಕಾಯಿ ಒಡೆಯುವ ಮೂಲಕ ಪ್ರಚಾರ ವಾಹನಕ್ಕೆ ಮುನ್ನುಡಿ ಇರಿಸಿದರು.
ಈ ಸಂದರ್ಭ ಹೊರೆಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ। ದೇವಿಪ್ರಸಾದ್ ಶೆಟ್ಟಿ ಬೆಳಪು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಕಾಪು ದಿವಾಕರ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಹರಿಯಪ್ಪ ಕೋಟ್ಯಾನ್, ಶ್ರೀಕರ ಶೆಟ್ಟಿ ಕಲ್ಯ, ಅರುಣ್ ಶೆಟ್ಟಿ ಪಾದೂರು, ಹರೀಶ್ ನಾಯಕ್, ಮೋಹನ್ ಬಂಗೇರ, ಅನಿಲ್ ಕುಮಾರ್, ಗೀತಾಂಜಲಿ ಎಂ. ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಶಾಂತಲತಾ ಶೆಟ್ಟಿ, ಅವಿನಾಶ್ ಶೆಟ್ಟಿ, ವೀಣಾ ಶೆಟ್ಟಿ ಉಪಸ್ಥಿತರಿದ್ದರು.