• Home  
  • ಕಾಪು ಹೊಸ ಮಾರಿಗುಡಿ : ಮಾ. 1 – 3ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿ ಉತ್ಸವ (Annual anniversary of Kaup Hosa Marigudi Pratishtha Brahmakalashotsava from 1st to 3rd March)
- ಧಾರ್ಮಿಕ

ಕಾಪು ಹೊಸ ಮಾರಿಗುಡಿ : ಮಾ. 1 – 3ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿ ಉತ್ಸವ (Annual anniversary of Kaup Hosa Marigudi Pratishtha Brahmakalashotsava from 1st to 3rd March)

Share: ಕಾಪು ಹೊಸ ಮಾರಿಗುಡಿ : ಮಾ. 1 – 3ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿ ಉತ್ಸವ  ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ “ಮಾತೃ ವೈಭವ” (Kaup) ಕಾಪು: ಕಳೆದ ವರ್ಷ ಅತ್ಯಂತ ವಿಜ್ರಂಭಣೆಯಿಂದ ಪುನರ್‌ ನಿರ್ಮಾಣಗೊಂಡು ಜೀರ್ಣೋದ್ಧಾರಗೊಂಡಿದ್ದ ಕಾಪು ಶ್ರೀ ಹೊಸ ಮಾರಿಗುಡಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ   ಸನ್ನಿದಾನದಲ್ಲಿ ಭಕ್ತರ ಸಹಕಾರದೊಂದಿಗೆ  ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ “ಮಾತೃ ವೈಭವ” ವನ್ನು […]

(Kaup) ಕಾಪು: ಕಳೆದ ವರ್ಷ ಅತ್ಯಂತ ವಿಜ್ರಂಭಣೆಯಿಂದ ಪುನರ್‌ ನಿರ್ಮಾಣಗೊಂಡು ಜೀರ್ಣೋದ್ಧಾರಗೊಂಡಿದ್ದ ಕಾಪು ಶ್ರೀ ಹೊಸ ಮಾರಿಗುಡಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ   ಸನ್ನಿದಾನದಲ್ಲಿ ಭಕ್ತರ ಸಹಕಾರದೊಂದಿಗೆ  ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ “ಮಾತೃ ವೈಭವ” ವನ್ನು ವಿಜೃಂಭಣೆಯಿಂದ  ಆಚರಿಸಲು ಮಾರಿಗುಡಿಯ ಶ್ರೀಮಾತಾ ಸಭಾಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಯಿತು.

   ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಪ್ರಸ್ತಾವನೆಗೈದರು.

 ದೇಶ ವಿದೇಶಗಳಲ್ಲಿ ನೆಲೆಸಿರುವ ಭಕ್ತರ  ಸಹಕಾರದೊಂದಿಗೆ ಕಾಪು ಹೊಸ ಮಾರಿಗುಡಿಯ  ಜೀರ್ಣೋದ್ಧಾರ, ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವೈಭವದಿಂದ ಸಂಪನ್ನಗೊಂಡಿದೆ. ಪ್ರತೀ ವರ್ಷ ಮಾರ್ಚ್ 1, 2, 3 ರಂದು ಪ್ರತಿಷ್ಠಾ ವರ್ಧಂತಿಯನ್ನು ವಿಜ್ರಂಭಣೆಯಿಂದ  ಆಚರಿಸಲು ಎಲ್ಲರೂ ಒಗ್ಗೂಡಿಕೊಂಡು ಮಾತೃ ವೈಭವ ಉತ್ಸವ ಸಮಿತಿಯನ್ನು ರಚಿಸಿ, ವಾರ್ಷಿಕ ಉತ್ಸವವನ್ನು ಆಚರಿಸುವಂತಾಗಬೇಕು‌ ಎನ್ನುವುದು ನಮ್ಮ ಅಭಿಲಾಷೆಯಾಗಿದ್ದು ಎಲ್ಲರ ಸಹಕಾರ ಅಗತ್ಯ ಎಂದು ಕೆ. ವಾಸುದೇವ ಶೆಟ್ಟಿ ಹೇಳಿದರು.

  ಸಮಿತಿ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯ ನಡೆದು ಬಂದಿದೆ. ದೇಶ ವಿದೇಶಗಳಲ್ಲಿಯೂ ಪ್ರಶಂಸೆ ವ್ಯಕ್ತವಾಗುತ್ತಿದೆ. ರಾಜ್ಯ, ಕೇಂದ್ರ ಸರಕಾರಗಳ ಪ್ರತಿ‌ನಿಧಿಗಳು, ಎಲ್ಲಾ ರಾಜಕಾರಣಿಗಳೂ ಹೊಸ ಮಾರಿಗುಡಿಯ‌ ಬಗ್ಗೆ ಧನಾತ್ಮಕ ಅಭಿಪ್ರಾಯ ಹೊಂದಿದ್ದಾರೆ. ಪ್ರತಿಷ್ಠಾ ವರ್ಧಂತಿಯನ್ನು ವಿಶೇಷವಾಗಿ ಕಾಪುವಿಗೆ ಪ್ರಸಿದ್ಧಿ ತರುವ ಉತ್ಸವವನ್ನಾಗಿ ಆಚರಿಸೋಣ. ಈ ಉತ್ಸವ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಮಾದರಿಯಾಗಲಿ ಎಂದರು.

 ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಕಾಪು ಹೊಸ ಮಾರಿಗುಡಿಯ  ಜೀರ್ಣೋದ್ಧಾರವು ಎಲ್ಲರ ಸಹಕಾರದೊಂದಿಗೆ ತಪಸ್ಸಿನ ರೀತಿಯಲ್ಲಿ  ಸಂಪನ್ನಗೊಂಡಿದೆ. ಅದರ ವಾರ್ಷಿಕ ವರ್ಧಂತಿಯನ್ನು ವಿಶೇಷ ರೀತಿಯಲ್ಲಿ ಆಚರಿಸುವ ಸಮಿತಿಯ ಉದ್ದೇಶ ಸ್ವಾಗತಾರ್ಹವಾಗಿದೆ ಎಂದರು.

 ಕಾಪು ಶ್ರೀ ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

  ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಲಾಲಾಜಿ‌ ಆರ್. ಮೆಂಡನ್, ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಅನಿಲ್ ಬಲ್ಲಾಳ್ ಕಾಪು ಬೀಡು, ರಮೇಶ್ ಹೆಗ್ಡೆ ಕಲ್ಯ, ಕಾಪು ದಿವಾಕರ ಶೆಟ್ಟಿ, ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಎಸ್. ಶೆಟ್ಟಿ, ವಿಕ್ರಂ ಕಾಪು, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ ಸಾಲ್ಯಾನ್, ಮನೋಹರ ರಾವ್ ಕಲ್ಯ, ರವೀಂದ್ರ ಮಲ್ಲಾರು, ಮಾಧವ ಆರ್. ಪಾಲನ್‌, ಜಯಲಕ್ಷ್ಮೀ ಎಸ್. ಶೆಟ್ಟಿ, ಚರಿತಾ ದೇವಾಡಿಗ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

    ಮಾಧವ ಆರ್. ಪಾಲನ್‌ ಸ್ವಾಗತಿಸಿದರು. ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.