• Home  
  • ಕಾಪು ಹೊಸ ಶ್ರೀ ಮಾರಿಗುಡಿಗೆ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರ ಭೇಟಿ (Members of the Legislative Assembly’s Subordinate Legislation Committee visit Kaup Hosa Sri Marigudi)
- ಧಾರ್ಮಿಕ

ಕಾಪು ಹೊಸ ಶ್ರೀ ಮಾರಿಗುಡಿಗೆ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರ ಭೇಟಿ (Members of the Legislative Assembly’s Subordinate Legislation Committee visit Kaup Hosa Sri Marigudi)

Share: ಕಾಪು ಹೊಸ ಶ್ರೀ ಮಾರಿಗುಡಿಗೆ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರ ಭೇಟಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದ ಮಾರಿಗುಡಿಯ ಅರ್ಚಕ ಶ್ರೀನಿವಾಸ ತಂತ್ರಿ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರಾದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ತಿನ ಸದಸ್ಯ ಮತ್ತು ಜೆಡಿಎಸ್‌ನ ಶಾಸಕಾಂಗ ಪಕ್ಷದ ಉಪನಾಯಕ ಟಿ. ಎ ಶರವಣ, ತುಮಕೂರು […]

(Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರಾದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ತಿನ ಸದಸ್ಯ ಮತ್ತು ಜೆಡಿಎಸ್‌ನ ಶಾಸಕಾಂಗ ಪಕ್ಷದ ಉಪನಾಯಕ ಟಿ. ಎ ಶರವಣ, ತುಮಕೂರು ಜಿಲ್ಲಾ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಗುಬ್ಬಿ ಶ್ರೀನಿವಾಸ್, ನವಲಗುಂದ ಕ್ಷೇತ್ರದ ಶಾಸಕ ಎನ್ ಎಚ್ ಕೋನ ರೆಡ್ಡಿಯವರು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಹಾಗೂ ಕಾಪು ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿಯವರೊಂದಿಗೆ ಭೇಟಿ ನೀಡಿ,  ಉಚ್ಚಂಗಿ ಸಹಿತ ಮಾರಿಯಮ್ಮನ ದರುಶನ ಪಡೆದರು.

  ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

  ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶೇಖರ ಸಾಲ್ಯಾನ್, ಮಾಧವ ಆರ್. ಪಾಲನ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಯೋಗಿಶ್ ವಿ. ಶೆಟ್ಟಿ, ಸುಗ್ಗಿ ಸುಧಾಕರ್ ಶೆಟ್ಟಿ, ಗೋವರ್ಧನ್ ಸೇರಿಗಾರ್,   ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.