• Home  
  • ಕಾಪು : 70ನೇ ಕನ್ನಡ ರಾಜ್ಯೋತ್ಸವದ ಆಚರಣೆ (Kapu: Celebration of 70th Kannada Rajyotsava)
- ಕಾಪು ತಾಲೂಕು ಆಡಳಿತ

ಕಾಪು : 70ನೇ ಕನ್ನಡ ರಾಜ್ಯೋತ್ಸವದ ಆಚರಣೆ (Kapu: Celebration of 70th Kannada Rajyotsava)

Share: ಕಾಪು : 70ನೇ ಕನ್ನಡ ರಾಜ್ಯೋತ್ಸವದ ಆಚರಣೆ ಕಾಪು ತಾಲೂಕು ಆಡಳಿತ ಕೇಂದ್ರದ ಪ್ರಜಾ ಸೌಧದಲ್ಲಿ ನಡೆದ ಕಾರ್ಯಕ್ರಮ  (Kaup) ಕಾಪು : ಕಾಪು ತಾಲೂಕು ಆಡಳಿತದ ನೇತೃತ್ವದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆಯು ಕಾಪು ತಾಲೂಕು ಆಡಳಿತ ಕೇಂದ್ರದ ಪ್ರಜಾ ಸೌಧದಲ್ಲಿ ಜರಗಿತು.    ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ತಹಶಿಲ್ದಾರ್ ಅನಂತ ಶಂಕರ್ ರವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದರು.    ಶಾಸಕ ಗುರ್ಮೆ ಸುರೇಶ್ […]

 (Kaup) ಕಾಪು : ಕಾಪು ತಾಲೂಕು ಆಡಳಿತದ ನೇತೃತ್ವದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆಯು ಕಾಪು ತಾಲೂಕು ಆಡಳಿತ ಕೇಂದ್ರದ ಪ್ರಜಾ ಸೌಧದಲ್ಲಿ ಜರಗಿತು.

   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ತಹಶಿಲ್ದಾರ್ ಅನಂತ ಶಂಕರ್ ರವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದರು.

   ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶುಭಾಶಂಸನೆಗೈದರು. ಕಾಪು ತಹಶಿಲ್ದಾರ್ ಅನಂತ ಶಂಕರ್ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು.

     ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ.ಪುಂಡಲೀಕ ಮರಾಠೆಯವರು ಕನ್ನಡ ರಾಜ್ಯೋತ್ಸವದ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು.

    ಈ ಸಂದರ್ಭ ಕಾಪು ಪುರಸಭೆಯ ಅಧ್ಯಕ್ಷೆ ಕುಮಾರಿ ಹರಿಣಾಕ್ಷಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕ್ರಂ ಕಾಪು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾಪು ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿ’ಸಿಲ್ವ, ಕಾಪು ಪುರಸಭಾ ಮುಖ್ಯಾಧಿಕಾರಿ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ವೃತ್ತ ನಿರೀಕ್ಷಕ ಅಝಮತ್ ಅಲಿ ಜಿ, ಪಡುಬಿದ್ರಿ ಠಾಣಾಧಿಕಾರಿ ಸಕ್ತಿವೇಲು ಉಪಸ್ಥಿತರಿದ್ದರು.

    ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.