• Home  
  • ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ (Karkada new higher primary school inauguration ceremony)
- ಶಾಲಾ ಕಾಲೇಜು

ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ (Karkada new higher primary school inauguration ceremony)

Share: ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಮಕ್ಕಳು ಹಿರಿಯರಿಗೆ ಹಾಗೂ ಶಿಕ್ಷಕರಿಗೆ ಗೌರವ ಕೊಡುವ ಪರಿಪಾಠ ಹೊಂದಬೇಕು: ಕೆ. ತಾರಾನಾಥ ಹೊಳ್ಳ (Udupi) ಉಡುಪಿ: ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 26-27 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜೂನ್ 1 ರಂದು ನಡೆಯಿತು.   ಶಾಲಾ ಪ್ರವೇಶ ದ್ವಾರದಿಂದ ಬ್ಯಾಂಡ್ ಸೆಟ್  ಮೆರವಣಿಗೆಯ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.   ಮುಖ್ಯ ಅತಿಥಿಯಾಗಿ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಮುಖ್ಯಅತಿಥಿಯಾಗಿ […]

(Udupi) ಉಡುಪಿ: ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 26-27 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜೂನ್ 1 ರಂದು ನಡೆಯಿತು.

  ಶಾಲಾ ಪ್ರವೇಶ ದ್ವಾರದಿಂದ ಬ್ಯಾಂಡ್ ಸೆಟ್  ಮೆರವಣಿಗೆಯ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.

  ಮುಖ್ಯ ಅತಿಥಿಯಾಗಿ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಮುಖ್ಯಅತಿಥಿಯಾಗಿ ಭಾಗವಹಿಸಿದ್ದು “ಮಕ್ಕಳು ಹಿರಿಯರಿಗೆ ಹಾಗೂ ಶಿಕ್ಷಕರಿಗೆ ಗೌರವ ಕೊಡುವ ಪರಿಪಾಠ ಹೊಂದಬೇಕು. ಶಾಲೆಯ ವಸ್ತುಗಳನ್ನು ಹಾಳು ಮಾಡಬಾರದು”ಎಂದರು.

  ಸಭೆಯಲ್ಲಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಯಿತು.

  ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಗುರುರಾಜ ಉಪಾಧ್ಯ             ಅಧ್ಯಕ್ಷತೆ ವಹಿಸಿದ್ದರು.

   ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಸ್ವಾಗತಿಸಿದರು. ಶಾಲಾ ಸಂಚಾಲಕರಾದ ಪ್ರಭಾಕರ ಕಾಮತ್ ಪ್ರಸ್ತಾವಿಕ ಮಾತುಗಳನ್ನಾಡಿದರು.

   ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಮಾಜಿ ಸದಸ್ಯ ಸಂಜೀವ ದೇವಾಡಿಗ ಉಪಸ್ಥಿತರಿದ್ದರು.

 ಅಧ್ಯಾಪಕ ಸುಧೀರ್ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಗೀತಾ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.