ಕಾರ್ಕಳ: ನಲ್ಲೂರಿನಲ್ಲಿ ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಮರಕ್ಕೆ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ.
ಕಾರ್ಕಳ ತಾಲೂಕಿನ ನಲ್ಲೂರು ಪರಪ್ಪಾಡಿ ಎಂಬಲ್ಲಿ ಇಂದ ಬೆಳಿಗ್ಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಟೆಂಪೋ ಮುಗುಚಿ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಲ್ಪೆಯಿಂದ ಬೆಂಗಳೂರಿಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆಯ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಟೆಂಪೋದಲ್ಲಿದ್ದ ಗೊಬ್ಬರ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.
ಟೆಂಪೋದಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದು ಆ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.