• Home  
  • ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ- ಅಭಿವೃದ್ಧಿ ವಿಚಾರದಲ್ಲಿ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು- ಸುನಿಲ್ ಕುಮಾರ್ (Karkala: Parasurama Theme Park Controversy – Politics of Hatred Should Be Ended in Development – Sunil Kumar)
- ಅಪರಾಧ - ರಾಜಕೀಯ

ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ- ಅಭಿವೃದ್ಧಿ ವಿಚಾರದಲ್ಲಿ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು- ಸುನಿಲ್ ಕುಮಾರ್ (Karkala: Parasurama Theme Park Controversy – Politics of Hatred Should Be Ended in Development – Sunil Kumar)

Share: ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ– ಅಭಿವೃದ್ಧಿ ವಿಚಾರದಲ್ಲಿ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು– ಸುನಿಲ್ ಕುಮಾರ್ (Karkal) ಕಾರ್ಕಳ; ಪರಶುರಾಮ ಥೀಂ ಪಾರ್ಕ್ ಹಾಗೂ ಪರಶುರಾಮ ಪ್ರತಿಮೆಯ ಬಗ್ಗೆ ಕಾಂಗ್ರೆಸ್ಸಿಗರು ನಡೆಸುತ್ತಿದ್ದ ನಿರಂತರ ಅಪಮಾನಕ್ಕೆ ಸೋಲಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಹೇಳಿದ್ದಾರೆ. ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಪ್ರತಿಮೆ ಫೈಬರ್‌ನದ್ದು ಎಂದು ನಡೆಸುತ್ತಿದ್ದ ಟೂಲ್ ಕಿಟ್ ಅಪಪ್ರಚಾರ ಸುಳ್ಳು ಎನ್ನುವುದು ಪೊಲೀಸ್ ತನಿಖೆಯಿಂದಲೇ ಸಾಬೀತಾಗಿದೆ. ಪ್ರತಿಮೆಯನ್ನು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಕಾರ್ಕಳ‌‌ ಪೊಲೀಸರು […]

(Karkal) ಕಾರ್ಕಳ; ಪರಶುರಾಮ ಥೀಂ ಪಾರ್ಕ್ ಹಾಗೂ ಪರಶುರಾಮ ಪ್ರತಿಮೆಯ ಬಗ್ಗೆ ಕಾಂಗ್ರೆಸ್ಸಿಗರು ನಡೆಸುತ್ತಿದ್ದ ನಿರಂತರ ಅಪಮಾನಕ್ಕೆ ಸೋಲಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಹೇಳಿದ್ದಾರೆ.

ಅವರು ಮಾಧ್ಯಮದೊಂದಿಗೆ ಮಾತನಾಡಿದರು.

ಪ್ರತಿಮೆ ಫೈಬರ್‌ನದ್ದು ಎಂದು ನಡೆಸುತ್ತಿದ್ದ ಟೂಲ್ ಕಿಟ್ ಅಪಪ್ರಚಾರ ಸುಳ್ಳು ಎನ್ನುವುದು ಪೊಲೀಸ್ ತನಿಖೆಯಿಂದಲೇ ಸಾಬೀತಾಗಿದೆ. ಪ್ರತಿಮೆಯನ್ನು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಕಾರ್ಕಳ‌‌ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ ಪರಶುರಾಮನ ಪ್ರತಿಮೆಯ ಸೊಂಟದ ಮೇಲ್ಭಾಗವನ್ನು ಮರು ವಿನ್ಯಾಸ ಉದ್ದೇಶದಿಂದ ತೆಗೆಯಲಾಗಿದೆ ಎಂದೂ ನ್ಯಾಯಲಯಕ್ಕೆ  ಸ್ಪಷ್ಟಪಡಿಸಿದ್ದಾರೆ. ಇದರಿಂದ ಪ್ರತಿಮೆ ಫೈಬರ್‌ನದ್ದು  ಎಂಬ ವ್ಯವಸ್ಥಿತ ಪಿತೂರಿಗೆ ಸೋಲಾಗಿದೆ.

ಇನ್ನಾದರೂ ರಾಜ್ಯ ಸರ್ಕಾರ ಪರಶುರಾಮ ಥೀಂ ಪಾರ್ಕ್‌ಗೆ ನಿಗದಿ ಮಾಡಿದ್ದ ಅನುದಾನವನ್ನು ಬಿಡುಗಡೆ ಮಾಡುವ ಜತೆಗೆ ಈ ತಾಣವನ್ನು ಪ್ರವಾಸೋದ್ಯಮಕ್ಕೆ ಮತ್ತೆ ತೆರೆಯಬೇಕು.

 ಅಭಿವೃದ್ಧಿ ವಿಚಾರದಲ್ಲಿ ನಡೆಸುವ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕೆಂದು ಒತ್ತಾಯಿಸುತ್ತೇನೆ ಎಂದು ಮಾಜಿ ಸಚಿವ , ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.