ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಫಾರ್ಕ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ
ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಫಾರ್ಕ್ ಗೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಒಂದೂವರೆ ಟನ್ ಭಾರದ 33 ಅಡಿ ಎತ್ತರದ ಪರಶುರಾಮ ಮೂರ್ತಿ ಸ್ಥಾಪಿಸಿದ್ದು, ಮೂರ್ತಿ ಗುಣಮಟ್ಟದ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದರು.
ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನ್ನು ಪ್ರವಾಸೋದ್ಯಮ ಕ್ಷೇತ್ರವಾಗಿಸುವ ದೃಷ್ಟಿಯಿಂದ ಪಾರ್ಕ್ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ಒತ್ತಡದಿಂದ ತಾತ್ಕಾಲಿಕ ವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ, ಈಗ ಮೂರ್ತಿ ಯ ಮೇಲ್ಭಾಗದಲ್ಲಿನ ಕೈ ತಲೆ ಭಾಗಗಳನ್ನು ಬದಲಾವಣೆ ಮಾಡಬೆಕಾಗುತ್ತದೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮದವರೊಂದಿಗೆ ಹೇಳಿದರು.
ಅವರು ಕಾರ್ಕಳ ಬೈಲೂರು ಪರಶುರಾಮ ಥೀಮ್ ಪಾರ್ಕ್ನಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
