ಕಾರ್ಕಳ ಮಂಜರಪಲ್ಕೆ ಬಳಿ ಬಸ್ಸು – ಬೊಲೆರೋ ಜೀಪ್ ಡಿಕ್ಕಿ: ಒರ್ವ ಸಾವು, ಇಬ್ಬರ ಸ್ಥಿತಿ ಗಂಭೀರ, 12 ಜನರಿಗೆ ಗಾಯ (Major accident at Karkala – Manjarapalke road: One death, 13 People injury)
ಕಾರ್ಕಳ ಮಂಜರಪಲ್ಕೆ ಬಳಿ ಬಸ್ಸು – ಬೊಲೆರೋ ಜೀಪ್ ಡಿಕ್ಕಿ: ಒರ್ವ ಸಾವು, ಇಬ್ಬರ ಸ್ಥಿತಿ ಗಂಭೀರ, 12 ಜನರಿಗೆ ಗಾಯ
(Karkala)ಕಾರ್ಕಳ : ಬಸ್ಸು – ಬೊಲೆರೋ ಡಿಕ್ಕಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯ ಗೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ಭಾನುವಾರ ಮದ್ಯಾಹ್ನ ಸಂಭವಿಸಿದೆ.
ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಬೋಲೆರೊ ಕಾರು, ಕಾರ್ಕಳ ಕಡೆಯಿಂದ ಮುಂಬಯಿಗೆ ತೆರಳುತ್ತಿದ್ದ ಮುಂಬೈ ಬಸ್ಸಿಗೆ ಡಿಕ್ಕಿ ಹೊಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ (48) ಸ್ಥಳದಲ್ಲೇ ಮೃತಪಟ್ಟರೆ, ಮಂಜು 45 , ಸುಜಯ (28) ರವರ ಸ್ಥಿತಿ ಗಂಭೀರ ವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ (Manipala Kasturba Hosphital) ದಾಖಲಿಸಲಾಗಿದೆ.
ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ನಂದಳಿಕೆಗೆ ಬೊಲೇರೋದಲ್ಲಿ ಬೆಳಿಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆಯ ಬಳಿಕ ಮಧ್ಯಾಹ್ನದ ಭೋಜನ ಮುಗಿಸಿ ಹಿಂದಿರುವ ಸಂಧರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮೃತರಾದ ಕುಟುಂಬ ಗುರಿಕಾರ ಶಿವಪ್ಪನವರೇ ಮುಂದೆ ನಿಂತು ದೈವದ ಕೆಲಸದ ವಿಧಿ ವಿಧಾನಗಳನ್ನು ನಡೆಸಿಕೊಟ್ಟಿದ್ದರು ಎಂದು ತಿಳಿದು ಬಂದಿದೆ
ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಅಗಮಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಪ್ರಕರಣ ದಾಖಲಿಸಿದ್ದಾರೆ.