• Home  
  • ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ (Karkala rape case, Third accused Abhay arrested : Udupi SP information)
- ಅಪರಾಧ - ರಾಜಕೀಯ

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ (Karkala rape case, Third accused Abhay arrested : Udupi SP information)

Share: ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ ಅತ್ಯಾಚಾರದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ- ಫೋಟೋ ಬಿಡುಗಡೆಗೊಳಿಸಿದ ಕಾಂಗ್ರೆಸ್  (Karkala) ಕಾರ್ಕಳ: ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಅಭಯ್(23) ಎಂಬಾತನನ್ನು ಬಂಧಿಸಲಾಗಿದೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.  ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವತ್ತು […]

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ

ಅತ್ಯಾಚಾರದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ- ಫೋಟೋ ಬಿಡುಗಡೆಗೊಳಿಸಿದ ಕಾಂಗ್ರೆಸ್

 (Karkala) ಕಾರ್ಕಳ: ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಅಭಯ್(23) ಎಂಬಾತನನ್ನು ಬಂಧಿಸಲಾಗಿದೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.

 ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವತ್ತು ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಪೊಲೀಸರು ಬಂಧಿಸಿದ್ದೇವೆ. ಅಭಯ್, ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ನಮಗೆ ತನಿಖೆಯಲ್ಲಿ ಕಂಡುಬಂದಿದೆ. ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಆತನನ್ನು ಬಂಧಿಸಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು ಸಂಪೂರ್ಣ ತನಿಖೆಗೆ ಒಳಪಡಿಸಲಾಗುವುದು ಎಂದು ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.

ಇದೇ ರೀತಿ NDPS  ಪ್ರಕರಣದಲ್ಲಿ ಅಭಯ್ ನನ್ನು ಬಂಧಿಸಲಾಗಿದೆ. ಜೊತೆಗೆ ಇಬ್ಬರು ಸಂಶಯಿತ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದೇವೆ. ಅವರ ಪಾತ್ರದ  ಬಗ್ಗೆ ತನಿಖೆ ನಡೆಸಿ ಆದಷ್ಟು ಬೇಗ ಪ್ರಕರಣವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಎಸ್  ಪಿ ತಿಳಿಸಿದ್ದಾರೆ.

 ಅತ್ಯಾಚಾರದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ- ಫೋಟೋ ಬಿಡುಗಡೆಗೊಳಿಸಿದ ಕಾಂಗ್ರೆಸ್

  ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್,  ಈ ಸಂಬಂಧ ಆತನ ಫೋಟೋಗಳನ್ನು ಬಿಡುಗಡೆ ಮಾಡಿದೆ.

ಕಾರ್ಕಳ ಮತ್ತು ಉಡುಪಿ ಯುವ ಕಾಂಗ್ರೆಸ್ ನಾಯಕರು ಫೋಟೋ ಬಿಡುಗಡೆಗೊಳಿಸಿದ್ದು, ಬಿಜೆಪಿಯ ದ್ವಂದ್ವ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಮೊದಲ ಆರೋಪಿ ಅಲ್ತಾಫ್ ಬಂಧನ ನಡೆದಾಗ ಬಿಜೆಪಿ ಪಟಾಲಂ ಅಬ್ಬರಿಸಿ ಬೊಬ್ಬಿರಿಯಿತು. ಸಂತ್ರಸ್ತ ಹುಡುಗಿ ಹಿಂದುವಾಗಿ ಕಂಡಳು. ಅತ್ಯಾಚಾರ ಪ್ರಕರಣವನ್ನು “ಜಿಹಾದಿ” ಕೃತ್ಯವಾಗಿ ಚಿತ್ರಿಸಲಾಯಿತು. ಸರಣಿ ಪ್ರತಿಭಟನೆ, ಪತ್ರಿಕಾ ಹೇಳಿಕೆಗಳು ಹೊರಟವು. NIA ತನಿಖೆ ನಡೆಯಬೇಕೆಂಬ ಆಗ್ರಹಗಳು ಕೇಳಿ ಬಂದವು. ಆದರೆ ಬಂಧನಕ್ಕೊಳಗಾಗಿದ್ದ ಮೂರನೇ ಆರೋಪಿ ಅಭಯ್, ಬಿಜೆಪಿ ಕಾರ್ಯಕರ್ತ ಎಂದು ಗೊತ್ತಾದ ಬಳಿಕ ಬಿಜೆಪಿ ಮೌನಕ್ಕೆ ಶರಣಾಗಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

 ಹಿಂದೂ ಯುವತಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್‌, ಕಾರ್ಕಳ ಶಾಸಕ ಸುನಿಲ್ ಆಪ್ತನಾಗಿದ್ದು, ಫೇಸ್ ಬುಕ್ ಪ್ರೊಫೈಲ್ ನಲ್ಲೂ ಸುನಿಲ್ ಕುಮಾರ್ ಫೋಟೋ ಹಾಕಿಕೊಂಡಿದ್ದಾನೆ.

ಈತ ಕಾರ್ಕಳ ಬಿಜೆಪಿಯಲ್ಲಿ ಸಕ್ರಿಯ ಸದಸ್ಯನಾಗಿದ್ದಾನೆ. ಇದು ಗೊತ್ತಾಗುತ್ತಿದ್ದಂತೆ ಬಿಜೆಪಿ ನಾಯಕರು ಹೋರಾಟವನ್ನು ಕೈಬಿಟ್ಟಿದ್ದಾರೆ. ಅತ್ಯಾಚಾರದಂತಹ ಪ್ರಕರಣದಲ್ಲಿ ಯಾವುದೇ ಧರ್ಮ, ಪಕ್ಷದವರಿದ್ದರೂ ಅದನ್ನು ಖಂಡಿಸುವ ಬದಲು ಧರ್ಮಾಧಾರಿತವಾಗಿ ಅದನ್ನು ಬಿಜೆಪಿ ನೋಡುತ್ತಿದೆ ಎಂದು ಕೈ ಮುಖಂಡರು ಆಕ್ರೋಶ ಹೊರಹಾಕಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.