• Home  
  • ಕಾರ್ಕಳ : ಸಿಡಿದ ಸುಡುಮದ್ದು ಘಟಕ , ಇಬ್ಬರಿಗೆ ಗಾಯ
- ಅಪರಾಧ

ಕಾರ್ಕಳ : ಸಿಡಿದ ಸುಡುಮದ್ದು ಘಟಕ , ಇಬ್ಬರಿಗೆ ಗಾಯ

Share: ಕಾರ್ಕಳ : ಸಿಡಿದ ಸುಡುಮದ್ದು ಘಟಕ , ಇಬ್ಬರಿಗೆ ಗಾಯಕಾರ್ಕಳ,: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ಘಟಿಸಿದೆ.ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿಸ್ದು, ಅವರನ್ನು […]

ಕಾರ್ಕಳ : ಸಿಡಿದ ಸುಡುಮದ್ದು ಘಟಕ , ಇಬ್ಬರಿಗೆ ಗಾಯ
ಕಾರ್ಕಳ,: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ಘಟಿಸಿದೆ.
ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿಸ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ.
ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದರೆ, ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡಕ್ಕೆ ಸಂಪೂರ್ಣ ಹಾನಿ ಆಗಿದೆ
ಸ್ಫೋಟಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಕಾರ್ಕಳ ನಗರ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.