ಬೆಂಗಳೂರು- ಪದ್ಮಶ್ರೀ ಪುರಸ್ಕೃತ ಸಾಲುಮರದ ಭಾನುವಾರ ಸಂಜೆ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತಂತೆ ಕುಟುಂಬದ ಮೂಲದಿಂದ ಮಾಹಿತಿ ನೀಡಲಾಗಿದ್ದು, ಭಾನುವಾರ ಸಂಜೆ ನಿವಾಸದಲ್ಲಿ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದಿದ್ದಾರೆ. ಈ ಪರಿಣಾಮ ಅವರ ಬೆನ್ನಿನ ಮೂಳೆಗೆ ಪೆಟ್ಟಾಗಿದೆ ಎಂದು ತಿಳಿಸಿದ್ದಾರೆ.
ಜಯನಗರದ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ, ಚಿಕಿತ್ಸೆಯಲ್ಲಿ ತೊಡಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

