# Tags
#ಅಪರಾಧ

ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ; ಚಿತ್ರನಟ ಅಲ್ಲು ಅರ್ಜುನ್‌ಗೆ 14 ದಿನ ನ್ಯಾಯಾಂಗ ಬಂಧನ

ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ; ಅಲ್ಲು ಅರ್ಜುನ್‌ಗೆ 14 ದಿನ ನ್ಯಾಯಾಂಗ ಬಂಧನ

ಹೈದರಾಬಾದ್ : ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. 

ಬಂದಿಸಿದ ನಂತರ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ನಾಂಪಲ್ಲಿ ಕೋರ್ಟ್‌ಲ್ಲಿ ಹಾಜರುಪಡಿಸಿದ್ದಾರೆ.

ಕೋಟ್೯ ಈಗ ಮಹತ್ವದ ಆದೇಶ ಹೊರಡಿಸಿದ್ದು, 14 ದಿನಗಳ ಕಾಲ ಅಲ್ಲು ಅರ್ಜುನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನ ಈಗ ತೆಲುಗು ಇಂಡಸ್ಟ್ರಿಯಲ್ಲಿ ಹಾಟ್ ಟಾಪಿಕ್ ಆಗಿದೆ.

ಪುಷ್ಪ-2 ಪ್ರೀಮಿಯರ್ ಶೋ ವೇಳೆ ನಡೆದ ದುರಂತ ಪ್ರಕರಣದಲ್ಲಿ ತೆಲುಗು ಬಿಗ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್ ನಿವಾಸದಲ್ಲಿ ಬಂಧಿಸಿರುವ ಚಿಕ್ಕಡಪಲ್ಲಿ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬಂಧನ ಪ್ರಕ್ರಿಯೆಯನ್ನು ಮುಗಿಸಿ ಕೋಟ್೯ಗೆ ಹಾಜರುಪಡಿಸಿದ್ದಾರೆ.

ಆದೇಶದನ್ವಯ 14 ದಿನಗಳ ಕಾಲ ಅಲ್ಲು ಅರ್ಜುನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2