• Home  
  • ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ಗ್ರಾಮಸ್ಥರ ಪ್ರತಿಭಟನೆ (Kavadi villagers protest against construction of a sewage disposal unit in Kavadi village)
- PROBLEMS

ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ಗ್ರಾಮಸ್ಥರ ಪ್ರತಿಭಟನೆ (Kavadi villagers protest against construction of a sewage disposal unit in Kavadi village)

Share:  ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ಗ್ರಾಮಸ್ಥರ ಪ್ರತಿಭಟನೆ  (Kota) ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಸೋಮವಾರ ಕಾವಡಿ ಪ್ರಾಥಮಿಕ ಉಪಕೇಂದ್ರದ ಬಳಿ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಪ್ರಮುಖರಾದ ಉದಯಶ್ಚಂದ್ರ ಶೆಟ್ಟಿ, ಘಟಕ ನಿರ್ಮಾಣಕ್ಕೆ […]

 (Kota) ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಸೋಮವಾರ ಕಾವಡಿ ಪ್ರಾಥಮಿಕ ಉಪಕೇಂದ್ರದ ಬಳಿ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಪ್ರಮುಖರಾದ ಉದಯಶ್ಚಂದ್ರ ಶೆಟ್ಟಿ, ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ಪರವಾಗಿ ಆಕ್ಷೇಪ ವ್ಯಕ್ತಪಡಿಸಿದರು. ಗ್ರಾಮವು ತನ್ನದೇ ಆದ ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ. ಇಲ್ಲಿಯ ಶೇಕಡ ೯೦% ಭಾಗ ಜನರು ಹೆಚ್ಚಾಗಿ ಕೃಷಿ ಹಾಗೂ ಹೈನುಗಾರಿಕೆಯನ್ನು ಅವಲಂಬಿತರಾಗಿದ್ದಾರೆ. ಇಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹೊಂದಿದ್ದು, ಜನನಿಬಿಡರು ವಸತಿಯನ್ನು ಹೊಂದಿದೆ. ಅಂಗನವಾಡಿ ಕೇಂದ್ರ, ಸಮುದಾಯ ಆರೋಗ್ಯ ಉಪಕೇಂದ್ರ ಮತ್ತು ಶತಮಾನಕ್ಕೂ ಹಳೆಯದಾದ ದೇವಸ್ಥಾನ, ದೈವಸ್ಥಾನ, ಹಾಗೂ ಗರಡಿಯನ್ನು ಹೊಂದಿದೆ. ಇಲ್ಲಿಯ ಜನರು ಹೆಚ್ಚಾಗಿ ಬಾವಿ ಹಾಗೂ ಕೆರೆಯ ನೀರನ್ನು ಕೃಷಿ ಮಾಡಲು ಮತ್ತು ಕುಡಿಯುವ ಬಗ್ಗೆ ನೀರನ್ನು ಉಪಯೋಗಿಸುತ್ತಿದ್ದಾರೆ.  ಹೀಗಿರುವಾಗ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ, ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡುವ ವಿಚಾರ ಬೆಳಕಿಗೆ ಬಂದಿದೆ. ಇಂತಹ ಘಟಕ ನಿರ್ಮಾಣದಿಂದ ನಮ್ಮ ಗ್ರಾಮಕ್ಕೆ ಮಲೇರಿಯಾ, ಡೆಂಗ್ಯೂ, ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಂದ ಚಿಕ್ಕ ಮಕ್ಕಳಿಗೆ, ವಯಸ್ಕರಿಗೆ, ಮಹಿಳೆಯರಿಗೆ ಆರೋಗ್ಯದಲ್ಲಿ ತೊಂದರೆಯಾಗುವ ಸಾಧ್ಯತೆ ಇದೆ. ಇದರ ವಾಸನೆಯಿಂದ ನಮ್ಮ ಗ್ರಾಮಸ್ಥರ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರುವುದು ಖಂಡಿತ.  ಕುಡಿಯುವ ನೀರಿಗಾಗಿ ಬಾವಿಯನ್ನು ಅವಲಂಬಿಸುವ ಕಾವಡಿ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ.

ಇದನ್ನೆಲ್ಲ ಮನಗಂಡು ತಾವು ನಮ್ಮ ಗ್ರಾಮಕ್ಕೆ ಕಿಂಚಿತ್ತೂ ಅವಶ್ಯಕತೆಯಿಲ್ಲದ ಈ ಮಲತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡುವ ನಿರ್ಣಯವನ್ನು ಈ ಕೂಡಲೇ ಕೈಬಿಡಬೇಕು. ಕಾವಡಿ ಗ್ರಾಮ ಜನರ ನೆಮ್ಮದಿ ಕೆಡಿಸಲು ಮುಂದಾಗಬೇಡಿ. ಒಂದೊಮ್ಮೆ ಗ್ರಾಮಸ್ಥರ ಮನವಿ ಲಕಿಸದೆ ನಿರ್ಮಾಣ ಕಾರ್ಯಮಾಡಿದರೆ ಉಗ್ರ ಸ್ವರೂಪದ ಹೋರಾಟಕ್ಕಿಳಿಯಬೇಕಾದಿತು ಎಂದು ಸಭೆಯಲ್ಲಿ ಎಚ್ಚರಿಸಿದರು.

 ಪಂಚಾಯತ್ ಅಧ್ಯಕ್ಷರ ಸ್ಪಷ್ಟೀಕರಣ

ಪ್ರತಿಭಟನಾ ಸಭೆಯಲ್ಲಿ ಭಾಗಿಯಾದ ವಡ್ಡರ್ಸೆ ಗ್ರಾಮಪಂಚಾಯತ್ ಅಧ್ಯಕ್ಷ ಲೋಕೇಶ್ ಕಾಂಚನ್ ನಮ್ಮ ಗ್ರಾಮದಲ್ಲಿ ಇನ್ನೊಂದು ಭಾಗದ ಮಲವನ್ನು ತಂದು ಇಲ್ಲಿ ನಿರ್ವಹಣಾ ಘಟಕ ನಿರ್ಮಿಸುವ ಅಗತ್ಯವಿಲ್ಲ. ಗ್ರಾಮ ಪಂಚಾಯತ್ ಗೆ ಮಾಹಿತಿ ಇಲ್ಲದೆ ಜಿಲ್ಲಾಧಿಕಾರಿಗಳ ಈ ತಿರ್ಮಾನಕ್ಕೆ ಜನಪ್ರತಿನಿಧಿಗಳಾಗಿ ಹಾಗೂ ಸ್ಥಳೀಯಾಡಳಿತ ಯಾವುದೇ ಸಮ್ಮತಿ ನೀಡುವುದಿಲ್ಲ. ಜನರ ಭಾವನೆಗಳಿಗೆ ಬೆಲೆ ನೀಡಿ ಈ ಯೋಜನೆಯನ್ನು ಈಗಿಂದಿಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್

ಮುಂಜಾನೆಯಿಂದ ಆರಂಭಗೊಂಡ ಪ್ರತಿಭಟನೆಯಲ್ಲಿ ಬ್ರಹ್ಮಾವರ ತಹಶಿಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಆಗಮಿಸುತ್ತಿದ್ದಂತೆ ಪ್ರತಿಭಟನಾಕಾರರ ಘೋಷಣೆ ಮುಗಿಲುಮುಟ್ಟಿತು. ಈ ವೇಳೆ ಗ್ರಾಮಸ್ಥರ ಮನವಿ ಸ್ವೀಕರಿಸಿದರು.

 ಈ ಸಂದರ್ಭ ಅವರು ಮಾತನಾಡಿ, ಘಟಕದ ಬಗ್ಗೆ ಈಗಾಲೇ ಸ್ಥಳ ಪರಿಶೀಲನೆ ಪೂರ್ಣಗೊಂಡಿದೆ. ಪ್ರಸ್ತುತ ನಿಮ್ಮ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗುವುದು ಮುಂದಿನ ಕ್ರಮಗಳನ್ನು ಅವರೇ ಕೈಗೊಳ್ಳಲಿದ್ದಾರೆ ಎಂದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.