• Home  
  • ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು 4 ವರ್ಷದ ಬಾಲಕಿ ಮೃತ್ಯು
- ಅಪರಾಧ

ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು 4 ವರ್ಷದ ಬಾಲಕಿ ಮೃತ್ಯು

Share: ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು 4 ವರ್ಷದ ಬಾಲಕಿ ಮೃತ್ಯು  ಕಾಸರಗೋಡು, ಆ 24 : ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ. ಸಿರಿಬಾಗಿಲಿನ ಮುಹಮ್ಮದ್ ಸುಬೈರ್ ರವರ ಪುತ್ರಿ ಆಯಿಷಾ ಸೆಯಾ (4) ಮೃತ ಪಟ್ಟವಳು. ಮನೆ ಸಮೀಪ ಈ ದುರಂತ ನಡೆದಿದೆ.  ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ಸನ್ನು ಹಿಂದಕ್ಕೆ ತೆಗೆಯುತ್ತಿದ್ದಾಗ ಅದೇ ಬಸ್ಸಿನಡಿ ಸಿಲುಕಿ ಈ ಘಟನೆ […]

ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು 4 ವರ್ಷದ ಬಾಲಕಿ ಮೃತ್ಯು

 ಕಾಸರಗೋಡು, ಆ 24 : ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ.

ಸಿರಿಬಾಗಿಲಿನ ಮುಹಮ್ಮದ್ ಸುಬೈರ್ ರವರ ಪುತ್ರಿ ಆಯಿಷಾ ಸೆಯಾ (4) ಮೃತ ಪಟ್ಟವಳು.

ಮನೆ ಸಮೀಪ ಈ ದುರಂತ ನಡೆದಿದೆ.

 ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ಸನ್ನು ಹಿಂದಕ್ಕೆ ತೆಗೆಯುತ್ತಿದ್ದಾಗ ಅದೇ ಬಸ್ಸಿನಡಿ ಸಿಲುಕಿ ಈ ಘಟನೆ ನಡೆದಿದೆ.

 ಸ್ಥಳೀಯರು ಧಾವಿಸಿ ಬಂದು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲಪಿಸಿದರೂ, ಆಗಲೇ ಬಾಲಕಿ ಮೃತಪಟ್ಟಿದ್ದಳು.

ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಮೃತ ಬಾಲಕಿ ನೆಲ್ಲಿಕುಂಜೆ ಖಾಸಗಿ ಶಾಲೆಯ ನರ್ಸರಿ ವಿದ್ಯಾರ್ಥಿನಿಯಾಗಿದ್ದಳು.

Leave a comment

Your email address will not be published. Required fields are marked *

eMedia Kannada  @2025. All Rights Reserved.