ಕಿನ್ನಿಗೋಳಿ ಮೂರು ಕಾವೇರಿಯಲ್ಲಿ ಟಿಪ್ಪರ್–ಕಾರು ನಡುವೆ ಅಪಘಾತ ; ಮೂವರು ಗಂಭೀರ
ಕಿನ್ನಿಗೋಳಿ: ಇಲ್ಲಿನ ಮೂರುಕಾವೇರಿ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂಡುಬಿದಿರೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಹಮ್ಮಾಯಿ ದೇವಸ್ಥಾನದ ಬಳಿ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರಿನ ಒಂದು ಬದಿ ಸಂಪೂರ್ಣವಾಗಿ ಜಖಂಗೊಡಿದ್ದು, ಇದರಲ್ಲಿ ಪ್ರಯಾಣಿಸುತ್ತಿದ್ದ ಐವರು ಪ್ರಯಾಣಿಕರ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.

